More

    ಪ್ರತಿ ಬೂತ್ ಮಟ್ಟದಲ್ಲೂ ಪ್ರಚಾರ

    ಪಾಂಡವಪುರ : ಎದುರಾಳಿಗಳು ರೂಪಿಸುವ ತಂತ್ರ, ಪ್ರತಿತಂತ್ರಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ. ಕ್ಷೇತ್ರದ ಮತದಾರರ ಬೆಂಬಲದಿಂದ ಈ ಚುನಾವಣೆಯಲ್ಲಿ ಗೆದ್ದು ಬರುವುದಾಗಿ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

    ತಾಲೂಕಿನ ಹರವು, ಅರಳಕುಪ್ಪೆ, ಕಟ್ಟೇರಿ, ಬನ್ನಂಗಾಡಿ, ಡಿಂಕಾ, ಗುಮ್ಮನಹಳ್ಳಿ, ಹೊನಗಾನಹಳ್ಳಿ, ಚಿನಕುರಳಿ ಹಾಗೂ ನಾರಾಯಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ರೈತಸಂಘ-ಕಾಂಗ್ರೆಸ್ ಕಾರ್ಯಕರ್ತರ ಪ್ರಚಾರ ಸಭೆ ನಡೆಸಿದ ಬಳಿಕ ಅವರು ಮಾತನಾಡಿದರು.
    ಯಾರೇ ಏನೇ ಮಾಡಿದರೂ ಅದಕ್ಕೆ ಪ್ರತಿತಂತ್ರ ಮಾಡಲ್ಲ. ನಮಗೆ ಜನ ಯಾಕೆ ಮತ ನೀಡಬೇಕು ಎಂಬುದರ ಮೇಲೆ ಪ್ರಚಾರ ಮಾಡುತ್ತಿದ್ದೇವೆ. ನಮಗೆ ಯಾರ ಜತೆಯಲ್ಲೂ ಸಂಘರ್ಷ ಬೇಕಿಲ್ಲ. ನಮ್ಮ ತಂದೆ ಜತೆ ಕೆಲಸ ಮಾಡಿರುವ ಅನೇಕ ಹಿರಿಯರು ಮತ್ತು ಕಾಂಗ್ರೆಸ್ ನಾಯಕರ ಮಾರ್ಗದರ್ಶನದಲ್ಲಿ ಈ ಚುನಾವಣೆಯನ್ನು ಬಲವಾಗಿ ಎದುರಿಸಲು ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
    ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪ್ರತಿ ಬೂತ್ ಮಟ್ಟದಲ್ಲೂ ವ್ಯವಸ್ಥಿತವಾಗಿ ಪ್ರಚಾರ ಮಾಡುವ ಕೆಲಸವನ್ನು ಕಾರ್ಯಕರ್ತರು ಮಾಡುತ್ತಿದ್ದಾರೆ. ಈ ಬಾರಿ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸ ಕಾರ್ಯಕರ್ತರಲ್ಲಿದೆ. ಇದಕ್ಕೆ ತ್ಕಕಂತೆ ಮತದಾರರಿಂದಲೂ ಸಕಾರಾತ್ಮಕವಾದ ಸ್ಪಂದನೆ ಸಿಗುತ್ತಿದೆ ಎಂದರು.
    ರಾಜ್ಯದ 224 ಕ್ಷೇತ್ರಗಳ ಪೈಕಿ ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ನಾಯಕರು ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ತೀರ್ಮಾನ ಕೈಗೊಂಡಿದ್ದಾರೆ. ಕಾಂಗ್ರೆಸ್‌ನ ಸ್ಥಳೀಯ ನಾಯಕರು ನಮ್ಮ ಜತೆ ಹೆಗಲಿಗೆ ಹೆಗಲು ಕೊಟ್ಟು ದುಡಿಯುತ್ತಿದ್ದು, ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಕಳೆದ ಚುನಾವಣೆಯ ಎಲ್ಲ ಲೋಪಗಳನ್ನು ಸರಿಪಡಿಸಿಕೊಂಡು ಈ ಚುನಾವಣೆ ಎದುರಿಸುತ್ತಿದ್ದೇವೆ ಎಂದರು.
    ಕಾಂಗ್ರೆಸ್ ಮತ್ತು ರೈತ ಸಂಘದ ಕಾರ್ಯಕರ್ತರು ತಮ್ಮ ತಮ್ಮಲ್ಲಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗಟ್ಟಿನಿಂದ ಹೋರಾಟ ಮಾಡಬೇಕು ಎಂದು ಹೇಳಿದರು.
    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಎನ್.ರವೀಂದ್ರ, ರೈತನಾಯಕಿ ಸುನೀತಾ ಪುಟ್ಟಣ್ಣಯ್ಯ, ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲೂಕು ಅಧ್ಯಕ್ಷ ನಾಗರಾಜು, ಸರ್ವೋದಯ ಕರ್ನಾಟಕ ಪಕ್ಷದ ತಾಲೂಕು ಅಧ್ಯಕ್ಷ ಎಸ್.ದಯಾನಂದ್, ಎಲ್.ಸಿ.ಮಂಜುನಾಥ್, ದೇವರಾಜು, ಕುಬೇರ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts