More

    ಪ್ರತಿ ಸೋಮವಾರ ಸಾಂಸ್ಕೃತಿಕ ಕಾರ್ಯಕ್ರಮ

    ಬಸವಕಲ್ಯಾಣ: ನೂತನ ಅನುಭವ ಮಂಟಪ ನಿಮರ್ಾಣ ಕಾರ್ಯಕ್ಕೆ ರಾಜ್ಯ ಸಕರ್ಾರದಿಂದ ಚಾಲನೆ ನೀಡಲಾಗಿದ್ದು, ಇದರ ಜತೆಜತೆಗೆ ಕಲ್ಯಾಣವನ್ನು ಸಾಂಸ್ಕೃತಿಕ ಕೇಂದ್ರವನ್ನಾಗಿ ರೂಪಿಸುವುದು ಸಕರ್ಾರದ ಉದ್ದೇಶವಾಗಿದೆ. ಇದಕ್ಕೆ ಪೂರಕವಾಗಿ ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದು ತಹಸೀಲ್ದಾರ್ ಸಾವಿತ್ರಿ ಸಲಗರ ತಿಳಿಸಿದ್ದಾರೆ.

    ಶರಣ ಸಂಸ್ಕೃತಿ ಪರಿಚಯಿಸುವ ಉದ್ದೇಶದಿಂದ ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯಿಂದ ನಗರದ ಬಸವೇಶ್ವರ ವೃತ್ತದ ಬಳಿಯ ಬಿಕೆಡಿಬಿ ಫಂಕ್ಷನ್ ಹಾಲ್ನಲ್ಲಿ ಸೋಮವಾರ ಸಂಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದ್ದು, ಮುಂದೆ ಪ್ರತಿ ಸೋಮವಾರ ಸಂಜೆ 5.30ರಿಂದ 7ರವರೆಗೆ ಕಾರ್ಯಕ್ರಮ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ಆರಂಭದಲ್ಲಿ 15 ನಿಮಿಷ ವಚನ ಗಾಯನ, 20 ನಿಮಿಷ ಶರಣರ ಕುರಿತು ಉಪನ್ಯಾಸ, 45- 55 ನಿಮಿಷ ವಚನ ನೃತ್ಯ, ಶರಣರ ಕುರಿತ ಜಾನಪದ ಕಲಾ ಪ್ರದರ್ಶನ, ಭಜನೆ ಸೇರಿದಂತೆ ಇತರ ಕಾರ್ಯಕ್ರಮಗಳಿಗೆ ಅವಕಾಶ ಕಲ್ಪಿಸಲಾಗುತ್ತಿದ್ದು, ಇದು ಶರಣ ಸಂಸ್ಕೃತಿ ಪ್ರದರ್ಶನದ ವೇದಿಕೆಯಾಗಿರಲಿದೆ ಎಂದು ಹೇಳಿದ್ದಾರೆ.

    ಆರಂಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮಕ್ಕಳ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ನಂತರ ಹಂತ-ಹಂತವಾಗಿ ಕಾಲೇಜು, ವಸತಿನಿಲಯಗಳ ವಿದ್ಯಾಥರ್ಿಗಳಿಗೆ ಅವಕಾಶ ನೀಡುವ ಉದ್ದೇಶವಿದೆ. ಹಿರಿಯರು, ವಚನ ಸಾಹಿತ್ಯ, ಶರಣ ಸಂಸ್ಕೃತಿಯ ಬಗ್ಗೆ ಅಧ್ಯನ ಮಾಡಿದವರು ಹಾಗೂ ಸಾರ್ವಜನಿಕರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕು. ಜತೆಗೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಿಕೊಂಡು ಹೋಗಲು ಸಲಹೆ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts