More

    ಪ್ರತ್ಯೇಕ ಪ್ರಕರಣದಲ್ಲಿ ಮೂವರು ಸಾವು


    ಹಾಸನ : ಪ್ರತ್ಯೇಕ ಪ್ರಕರಣಗಳಲ್ಲಿ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮತ್ತಿಬ್ಬರ ಮೃತದೇಹ ನಾಲೆಯಲ್ಲಿ ಪತ್ತೆಯಾಗಿದೆ.
    ಕೊಣನೂರು ಹೋಬಳಿಯ ಕಡುವಿನ ಹೊಸಹಳ್ಳಿ ಗ್ರಾಮದ ಗೋವಿಂದ ಬೋಯಿ (70) ಅವರ ಶವ ಬುಧವಾರ ಕೊಣನೂರು ಕೃಷ್ಣರಾಜ ನಾಲೆ ಬಳಿ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಕೊಣನೂರು ಸರ್ಕಾರಿ ಆಸ್ಪತ್ರೆಗೆ ಮೃತದೇಹ ಸಾಗಿಸಿ ಶವ ಪರೀಕ್ಷೆ ನಡೆಸಲಾಯಿತು.


    ಗೋವಿಂದ ಬೋಯಿ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ. ಗೋವಿಂದ ಬೋಯಿ ಒಂದು ಎಕರೆಯಲ್ಲಿ ಕೃಷಿ ಮಾಡಿದ್ದರು. ಬೆಳೆ ಕೈ ಕೊಟ್ಟಿದ್ದಲ್ಲದೇ ಅನಾರೋಗ್ಯದಿಂದ ಬಳಲುತ್ತಿದ್ದರು. ವಿವಿಧ ಸ್ವಸಹಾಯ ಸಂಘಗಳಲ್ಲಿ 2.10 ಲಕ್ಷ ರೂ. ಸಾಲ ಮಾಡಿದ್ದರು. ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಅವರ ಪುತ್ರ ವಿನಯ್, ಕೊಣನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.


    ಇಬ್ಬರು ಜಲಸಮಾಧಿ:
    ರಾಮನಾಥಪುರ ಹೋಬಳಿಯ ಬೆಟ್ಟಸೋಗೆ ಗ್ರಾಮದ ಯೋಗೇಶ್ (40) ಅವರ ಮೃತದೇಹ ಬುಧವಾರ ಬಸವನಹಳ್ಳಿ ನಾಲೆ ಕೆರೆಯಲ್ಲಿ ಪತ್ತೆಯಾಗಿದೆ. ಕೆರೆಯಲ್ಲಿ ಶವ ಕಂಡ ಸ್ಥಳೀಯರು ಕೊಣನೂರು ಪೊಲೀಸರಿಗೆ ತಿಳಿಸಿದ್ದಾರೆ.


    ಅಂಗವಿಕಲರಾಗಿದ ಯೋಗೇಶ್ ಊರ ಹೊರಭಾಗದಲ್ಲಿ ಹರಿಯುವ ಕೃಷ್ಣರಾಜ ನಾಲೆ ಬಳಿ ತೆರಳಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ಬುಧವಾರ ಜೆ ನೀರಿನಿಂದ ಮೃತದೇಹ ಹೊರ ತೆಗೆದು, ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಶವಪರೀಕ್ಷೆ ಮಾಡಿಸಲಾಯಿತು. ಈ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ಮಹಿಳೆ ಶವ ಪತ್ತೆ: ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಮಗ್ಗೆ ಹೋಬಳಿಯ ಆನಂದಪುರ ಬಳಿ ಹೇಮಾವತಿ ನಾಲೆಯಲ್ಲಿ 25 ವರ್ಷದ ಮಹಿಳೆ ಶವ ಗುರುವಾರ ಪತ್ತೆಯಾಗಿದೆ.
    ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಅರಕಲಗೂಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಸನ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಮೃತದೇಹ ಸಾಗಿಸಲಾಗಿದೆ. ಮೃತ ಮಹಿಳೆ ಕಣಿಯಾರು ಗ್ರಾಮದ ನಿವಾಸಿ ಎಂದು ತಿಳಿದು ಬಂದಿದ್ದು, ಸ್ವಂದೂರು ದಾಖಲಿಸಿಕೊಂಡಿರುವ ಪೊಲೀಸರು ಸಾವಿನ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts