More

    ಪ್ರತ್ಯೇಕ ಹಾಲು ಒಕ್ಕೂಟ – ಸದನದ ಗಮನ ಸೆಳೆದ ಶಾಸಕ ಬಸವಂತಪ್ಪ

    ದಾವಣಗೆರೆ: ದಾವಣಗೆರೆ ಮತ್ತು ಚಿತ್ರದುರ್ಗ ಪ್ರತ್ಯೇಕ ಹಾಲು ಒಕ್ಕೂಟ ಆರಂಭಿಸುವಂತೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಸರ್ಕಾರವನ್ನು ಆಗ್ರಹಿಸಿದರು.

    ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಗಮನ ಸೆಳೆದ ಶಾಸಕ ಬಸವಂತಪ್ಪ, 2015ರಲ್ಲಿ ಅಂದಿನ ಸರ್ಕಾರದ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟು ಪ್ರತ್ಯೇಕ ಹಾಲು ಒಕ್ಕೂಟ ಪ್ರಾರಂಭಿಸಲು ನಿರ್ಧರಿಸಲಾಗಿತ್ತು. ಅಂದಿನಿಂದ ಈವರೆಗೂ ಅದು ಆರಂಭವಾಗಿಲ್ಲ ಎಂದರು.
    ಪ್ರತ್ಯೇಕ ಹಾಲು ಒಕ್ಕೂಟ ಆರಂಭಕ್ಕೆ ಈಗಾಗಲೇ ಕಲಪನಹಳ್ಳಿ ಗ್ರಾಮದಲ್ಲಿ ಜಮೀನು ಹಾಗೂ ರಸ್ತೆ ಸಂಪರ್ಕ ಒದಗಿಸಲಾಗಿದೆ. ಇದಕ್ಕೆ ನಿಗಮವೂ ಕೂಡ ಸಮ್ಮಿತಿ ನೀಡಿದೆ. ಕೂಡಲೇ ಆರಂಭಿಸಬೇಕೆಂದು ಆಗ್ರಹಿಸಿದರು.
    ದಾವಣಗೆರೆ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಸಹಕಾರ ಸಂಘಗಳಿದ್ದು ಅತಿ ಹೆಚ್ಚು ಹಾಲು ಉತ್ಪಾದನೆ ಮಾಡಲಾಗುತ್ತಿದೆ. ಈ ಭಾಗದಲ್ಲಿ ಹಾಲು ಒಕ್ಕೂಟ ಆರಂಭಿಸಿದರೆ ರೈತರಿಗೆ ಅನುಕೂಲ ಆಗುತ್ತದೆ. ಕೂಡಲೇ ಸರ್ಕಾರ ಅನುದಾನ ಬಿಡುಗಡೆ ಮಾಡಿ, ಪ್ರತ್ಯೇಕ ಹಾಲು ಒಕ್ಕೂಟ ಆರಂಭಿಸಬೇಕೆಂದು ಮನವಿ ಮಾಡಿದರು.
    ಶಾಸಕರ ಮಾತಿಗೆ ಸಕಾರಾತ್ಮಕವಾಗಿ ಪ್ರತ್ರಿಕ್ರಿಯಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕೂಡಲೇ ಈ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts