More

    ಪ್ರಧಾನಿ ನರೇಂದ್ರ ಮೋದಿ ಒಬ್ಬ ವ್ಯಕ್ತಿಯಲ್ಲ, ಅದ್ಭುತ ಶಕ್ತಿ: ಕೆ.ಎಸ್.ಗುರುಮೂರ್ತಿ

    ಶಿಕಾರಿಪುರ: ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ಆಡಳಿತದಲ್ಲಿ ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಕಾಶಿಸುತ್ತಿದೆ. ಅವರು ಒಬ್ಬ ವ್ಯಕ್ತಿಯಲ್ಲ, ಅವರೊಬ್ಬ ಅದ್ಭುತ ಶಕ್ತಿ ಎಂದು ಎಂಎಡಿಬಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಹೇಳಿದರು.
    ಮೋದಿ ಅವರ 72ನೇ ವರ್ಷದ ಜನ್ಮೋತ್ಸವದ ಅಂಗವಾಗಿ ಪಟ್ಟಣದಲ್ಲಿ ಶನಿವಾರ ಬಿಜೆಪಿ ಯುವಮೋರ್ಚಾ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಪ್ರಧಾನಿ ಜನ್ಮದಿನವನ್ನು ಸೇವಾ ಪಾಕ್ಷಿಕವಾಗಿ ಆಚರಿಸಲಾಗುತ್ತದೆ. ಮನುಷ್ಯ ಸೇವೆಯಿಂದ ಪಾವನನಾಗುತ್ತಾನೆ. ಮೋದಿ ಅವರು ತಮ್ಮ ಬದುಕಿನುದ್ದಕ್ಕೂ ಸೇವಾಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದ್ದರಿಂದ ಈ ದಿನ ನಾವು ಸೇವಾ ಸಮರ್ಪಣೆ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದರು.
    ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸವಲತ್ತುಗಳನ್ನು ನಮ್ಮ ಕಾರ್ಯಕರ್ತರು ತಲುಪಿಸಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿಚಯಿಸಿದಲ್ಲಿ ಸಂಘಟಿತ ಪ್ರಯತ್ನದಿಂದ ಯಶಸ್ಸು ಸಾಧ್ಯ. ರಕ್ತದಾನ ಎಲ್ಲ ದಾನಗಳಿಗಿಂತ ಶ್ರೇಷ್ಠ. ಒಂದು ಜೀವ ಉಳಿಸುವ ಪುಣ್ಯ ನಮಗೆ ರಕ್ತದಾನದಿಂದ ದೊರೆಯುತ್ತದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts