More

    ಪ್ರಧಾನಿ ಮೋದಿ ಕನಸು ನನಸಾಗಿಸೋಣ


    ಯಾದಗಿರಿ: ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಸರಕಾರ ಕಳೆದ 9 ವರ್ಷಗಳಿಂದ ದೇಶವನ್ನು ಅಭಿವೃದ್ಧಿಯತ್ತ ಮುನ್ನಡೆಸುತ್ತಿದೆ ಎಂದು ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ ತಿಳಿಸಿದರು.

    ಭಾನುವಾರ ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಕೇಂದ್ರ ಸರಕಾರ ಮಹತ್ವಾಕಾಂಕ್ಷಿ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಎಲ್ಲ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ. ನಮ್ಮ ಸರಕಾರದ ಕಾರ್ಯಕ್ರಮಗಳು ಪ್ರತಿ ಮನೆಗೂ ತಲುಪಿಸಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಕನಸು. ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಬ್ಯಾಂಕುಗಳಿಂದ ನೇರ ಸಾಲ ನೀಡುವ ಯೋಜನೆಯನ್ನು ಆಯೋಜಿಸಿದೆ ಎಂದರು.

    ಪ್ರಮುಖವಾಗಿ ಮುದ್ರಾ, ಜನಧನ್, ಪಿಎಂ ವಿಶ್ವಕರ್ಮ, ಉಜ್ವಲ, ಕೃಷಿ ಸಮ್ಮಾನ್ ಸೇರಿ ಅನೇಕ ಯೋಜನೆಗಳು ಇಂದು ಮನೆಮಾತಾಗಿವೆ. ನಮ್ಮ ಪ್ರಧಾನಿಗಳ ಸಂಕಲ್ಪದಂತೆ 2047ರ ಹೊತ್ತಿಗೆ ಭಾರತ ಜಗತ್ತಿನ ಮೊದಲ ಸ್ಥಾನದಲ್ಲಿ ನಿಲ್ಲುವಂತಾಗಲು ಸಾರ್ವಜನಿಕರ ಸಹಭಾಗಿತ್ವ ಅಗತ್ಯ. ಸಕರ್ಾರದ ಯೋಜನೆಗಳನ್ನು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮೂಲಕ ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿ. ಜನಸಾಮಾನ್ಯರು ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿದರೆ ದೇಶ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.

    ಬಿಜೆಪಿ ಯುವ ನಾಯಕ ಮಹೇಶರಡ್ಡಿ ಮುದ್ನಾಳ್ ಮಾತನಾಡಿ, ಕೇಂದ್ರ ಸರಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ 6,000 ರೂಪಾಯಿ ನೀಡಲಾಗುತ್ತಿದೆ. ದೇಶದ ಪ್ರತಿಯೊಬ್ಬರು ಬ್ಯಾಂಕ್ಗಳಲ್ಲಿ ವ್ಯವಹಾರ ನಡೆಸಲು ಜನಧನ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಜನರ ಆರೋಗ್ಯಕ್ಕಾಗಿ ಕೇಂದ್ರ ಸರಕಾರ ಜಾರಿಗೆ ತಂದಿರುವ ಆಯುಷ್ಮಾನ್ ಯೋಜನೆ ಜನರಿಗೆ ನೆರವಾಗಿದೆ. ದೇಶದ ಜನರ ಸ್ವಾವಲಂಬನೆ ಬದುಕಿಗೆ ಕೇಂದ್ರ ಸಕರ್ಾರದ ಯೋಜನೆಗಳು ಆಸರೆಯಾಗಿವೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts