

ಚಿಕ್ಕಮಗಳೂರು: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಘಟಕ ಯೋಜನೆಯಿಂದ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ನಗರದ ಎಐಟಿ ಕಾಲೇಜಿನ ಆಂಫಿ ಥಿಯೇಟರ್‌ನಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ ಹಾಗೂ ಕೃಷಿ ಮತ್ತು ಕೃಷಿ ಸಂಬAಧಿತ ಇಲಾಖೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಹಾಗೂ ಇತರೆ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಕಾರ್ಯಾಗಾರ ಮತ್ತು ಸವಲತ್ತು ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಸ್ವಂತ ಉದ್ಯೋಗ ಮತ್ತು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡಿ ಬದುಕುವುದು ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರದಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಘಟಕದಿಂದ ಒಂದಿಷ್ಟು ಉದ್ಯೋಗ ಸೃಷ್ಟಿ ಮಾಡಬಹುದು. ನಾವು ಕಲಬೆರಕೆ ಮುಕ್ತ ಆಹಾರ ಸೇವಿಸಲು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಯೋಜನೆಯಿಂದ ಪ್ರಾರಂಭ ಮಾಡಬೇಕು. ಇಂತಹ ಕಾರ್ಯಗಾರ ನಡೆಯುತ್ತಿರುವುದು ಕರ್ನಾಟಕ ರಾಜ್ಯದಲ್ಲಿ ಚಿಕ್ಕಮಗಳೂರು ಎರಡನೇ ಸ್ಥಾನ ಪಡೆದುಕೊಂಡಿರುವುದು ಖುಷಿಯ ವಿಚಾರ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೂಡ ಇಂತಹ ಕಾರ್ಯಕ್ರಮ ನಡೆಯಬೇಕು. ಸ್ವಂತ ಉದ್ಯೋಗ ಮಾಡುವವರಿಗೆ ಈ ಯೋಜನೆಯಿಂದ ಅನುಕೂಲಕರವಾಗುತ್ತದೆ ಎಂದು ಹೇಳಿದರು.
ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ರೈತರಿಗೆ ಹಾಗೂ ಸ್ವಂತ ಉದ್ಯೋಗ ಮಾಡುವವರಿಗೆ ಅನುಕೂಲವಾಗಲು ಇಂತಹ ಯೋಜನೆಗಳನ್ನು ಜಾರಿ ತಂದಿದೆ. ರೈತರು ದೇಶದ ಆಸ್ತಿ. ಗುಣಮಟ್ಟದ ಆಹಾರ ಪದಾರ್ಥಗಳನ್ನು ಬೆಳೆಯುವ ರೈತರಿಗೆ ಇನ್ನು ಉತ್ತಮವಾಗಿ ಬೆಂಬಲವನ್ನು ಸರ್ಕಾರ ನೀಡಬೇಕು ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಎಂ.ಸಿ.ಶಿವನAದ ಸ್ವಾಮಿ ಮಾತನಾಡಿ, ಯುವಪೀಳಿಗೆಗೆ ಸ್ವಂತ ಉದ್ಯೋಗ ಮಾಡಲು ತಮ್ಮ ಜೀವನವನ್ನು ರೂಪಿಸಿಕೊಳ್ಳಲು ಈ ಯೋಜನೆ ಸಹಕಾರಿ. ಜೊತೆಗೆ ಒಳ್ಳೆಯ ವೇದಿಕೆ ಕಲ್ಪಿಸಿಕೊಳ್ಳಲು ಅವಕಾಶವಾಗಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ವ್ಯವಸ್ಥಾಪಕ ನಿದೇಶಕ ಡಾ.ಕೆ.ಎಚ್.ಶಿವಕುಮಾರ್ ಮಾತನಾಡಿ, ರೈತರನ್ನು ಉದ್ದಿಮೆಗಾರನ್ನಾಗಿ ಮಾಡುವುದು ಈ ಯೋಜನೆಯ ಮುಖ್ಯ ಉz್ದೆÃಶವಾಗಿದೆ. ಇದರಿಂದ ಇನ್ನು ಹಲವಾರು ಹೊಸ ಸ್ವಂತ ಉದ್ಯೋಗ ಕೈಗೊಳ್ಳುವವರಿಗೆ ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ಹೇಳಿದರು.
ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ ಬಿ.ಎಚ್.ಹರೀಶ್, ಭಾರತೀಯ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಡಿ.ಎಲ್.ಅಶೋಕ್ ಕುಮಾರ್ ಮತ್ತಿತರರಿದ್ದರು.