More

    ಪ್ರಧಾನ ಮಂತ್ರಿಗೆ ಕೃತಜ್ಞತಾ ಮತ್ತು ಸಂಭ್ರಮಾಚರಣೆ ಸಮಾರಂಭ

    ಮೈಸೂರು: ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೀಡಾಗಿದ್ದ ರಸ್ತೆಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರ ಸಹಾಯಧನ ನೀಡಿರುವ ಹಿನ್ನೆಲೆಯಲ್ಲಿ ಬೆಳಕು ಚಾರಿಟಬಲ್ ಟ್ರಸ್ಟ್ ವತಿಯಿಂದ ಗುರುವಾರ ಪ್ರಧಾನ ಮಂತ್ರಿಗೆ ಕೃತಜ್ಞತಾ ಮತ್ತು ಸಂಭ್ರಮಾಚರಣೆ ಸಮಾರಂಭ ನೆರವೇರಿತು.

    ರಾಮಾನುಜ ಮುಖ್ಯ ರಸ್ತೆಯ ಜನಸೇವಾ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ಉದ್ಘಾಟಿಸಿದರು. ಬಳಿಕ ಮಾತನಾಡಿ, ಪ್ರತಿಯೊಬ್ಬ ಬೀದಿಬದಿ ವ್ಯಾಪಾರಿಯೂ ಸ್ವಂತ ಬಂಡವಾಳದಿಂದ ವ್ಯಾಪಾರ ವ್ಯವಹಾರ ವೃದ್ಧಿಸಿಕೊಳ್ಳಬೇಕೆಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮನಿರ್ಭರ ಭಾರತ ಯೋಜನೆಯಡಿಯಲ್ಲಿ ಹತ್ತು ಸಾವಿರ ರೂ. ಬಡ್ಡಿರಹಿತ ಕಿರುಸಾಲ ಸೌಲಭ್ಯ ಕಲ್ಪಿಸಿದ್ದಾರೆ. ಈ ಸೌಲಭ್ಯ ಪಡೆಯಲು ದೇಶಾದ್ಯಂತ 28 ಲಕ್ಷ ರಸ್ತೆಬದಿ ವ್ಯಾಪಾರಿಗಳು ಅರ್ಜಿ ಸಲ್ಲಿಸಿದ್ದು, ಈಗಾಗಲೇ 15 ಲಕ್ಷ ಜನರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಿದೆ ಎಂದರು.

    ಟ್ರಸ್ಟ್ ಅಧ್ಯಕ್ಷ ಕೆ.ಎಂ.ನಿಶಾಂತ್ ಮಾತನಾಡಿ, ಬೆಳಕು ಚಾರಿಟಬಲ್ ಟ್ರಸ್ಟ್ ಜನಸೇವಾ ಕೇಂದ್ರದಲ್ಲಿ ಸುಮಾರು 300ಕ್ಕೂ ಹೆಚ್ಚು ರಸ್ತೆ ಬದಿ ವ್ಯಾಪಾರಿಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲಾಗಿತ್ತು. ಅವರೆಲ್ಲರ ಖಾತೆಗೆ ಹಣ ತಲುಪಿರುವುದರಿಂದ ಪ್ರಧಾನಿ ಮೋದಿಗೆ ಕೃತಜ್ಞತೆ ತಿಳಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದೇವೆ ಎಂದು ತಿಳಿಸಿದರು.

    ಸಂಸ್ಥೆಯ ಸಂಚಾಲಕ ಎಂ.ಎನ್. ಧನುಷ್, ಆದಿಕರ್ನಾಟಕ ರಸ್ತೆ ಬದಿ ವ್ಯಾಪಾರಿಗಳ ಸಂಘದ ಮುಖಂಡ ರವಿಕುಮಾರ್, ಮುಖಂಡರಾದ ವಾಣೀಶ್, ಜಯರಾಮ್, ಸುದರ್ಶನ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts