More

    ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ

    ಗದಗ: ನಗರದ ಕನಕ ಭವನದಲ್ಲಿ ಆಯೋಜಿಸಿದ್ದ ಮಾಜಿ ಸಿಎಂ ದಿ. ಡಿ ದೇವರಾಜ ಅರಸು ಜನ್ಮದಿನ ಕಾರ್ಯಕ್ರಮದಲ್ಲಿ ಕನ್ನಡದ ನಂಬರ್ 1 ದಿನಪತ್ರಿಕೆ ವಿಜಯವಾಣಿ ಹಾಗೂ ದಿಗ್ವಿಜಯ ನ್ಯೂಸ್ ಚಾನೆಲ್ ಆಶ್ರಯದಲ್ಲಿ ಇತಿ್ತೕಚೆಗೆ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಪ್ರಮಾಣಪತ್ರ ವಿತರಿಸಲಾಯಿತು.
    ಗದಗ ನಗರದ ವಿದ್ಯಾದಾನ ಸಮಿತಿ ಪಪೂ ಕಾಲೇಜ್ ವಿದ್ಯಾರ್ಥಿನಿ ಸಕ್ಕೂಬಾಯಿ ಹುನಗುಂದ ಪ್ರಥಮ, ಸನ್ಮಾರ್ಗ ಪಪೂ ಕಾಲೇಜ್ ವಿದ್ಯಾರ್ಥಿ ಶ್ರೀಪತಿ ಕುಲಕರ್ಣಿ ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿನಿ ರಾಜೇಶ್ವರಿ ಚಿಕ್ಕನಗೌಡ್ರ ಅವರಿಗೆ ಪ್ರಮಾಣಪತ್ರ ನೀಡಲಾಯಿತು.
    ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ, ಶಾಸಕ ಎಚ್ ಕೆ ಪಾಟೀಲ, ನಗರಸಭೆ ಅಧ್ಯಕ್ಷೆ ಉಷಾ ದಾಸರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದಪ್ಪ ಪಲ್ಲೇದ, ಡಿಸಿ ವೈಶಾಲಿ ಎಂ ಎಲ್, ಜಿಪಂ ಸಿಇಒ ಡಾ ಸುಶೀಲಾ ಬಿ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾ ಅಧಿಕಾರ ಮೆಹಬೂಬ ತುಂಬರಮಟ್ಟಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರವಿ ಗುಂಜೀಕರ ಮತ್ತಿತರರು ಇದ್ದರು.
    ಪ್ರಥಮ ಬಹುಮಾನ 5 ಸಾವಿರ ರೂ. ದ್ವಿತೀಯ ಬಹುಮಾನ 3 ಸಾವಿರ ರೂ. ಹಾಗೂ ತೃತೀಯ ಬಹುಮಾನ 2 ಸಾವಿರ ರೂ.ನಗದು ಹಾಗೂ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ಆಗಸ್ಟ್ 6ರಂದು ನಗರದ ವಿಡಿಎಸ್ ಟಿಸಿ ಕಾಲೇಜ್​ನಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು. ಜಿಲ್ಲೆಯ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಹಾಗೂ ಗದಗ ತಾಲೂಕು ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ರವಿ ಗುಂಜೀಕರ ಅವರು ಬಹುಮಾನದ ಪ್ರಾಯೋಜಕತ್ವ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts