More

    ಪ್ರವಾಸೋದ್ಯಮ ದೃಷ್ಟಿಯಿಂದ ಸಾಗರ ಗಣಪತಿ ಕೆರೆ ಅಭಿವೃದ್ಧಿ

    ಸಾಗರ: ಪ್ರವಾಸೋದ್ಯಮದ ದೃಷ್ಟಿಯಿಂದ ಪಟ್ಟಣದ ಗಣಪತಿ ಕೆರೆ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗಿದ್ದು ಸರ್ಕಾರದ ವಿವಿಧ ಯೋಜನೆಯಲ್ಲಿ 6 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು.
    ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಇಲಾಖೆಗಳ ಅಭಿಯಂತರೊಂದಿಗೆ ಸಭೆ ನಡೆಸಿದ ಬಳಿಕ ಗಣಪತಿ ಕೆರೆ ಪ್ರದೇಶ ವೀಕ್ಷಿಸಿ ಮಾತನಾಡಿ, ಈವರೆಗೂ ಸರ್ಕಾರ ನೀಡಿರುವ ಹಣದಲ್ಲಿ ಕೆರೆ ಅಭಿವೃದ್ಧಿಗೆ ಹಣ ವಿನಿಯೋಗಿಸಿರಲಿಲ್ಲ. ಈಗ ಬಿಡುಗಡೆಯಾಗಿರುವ 6 ಕೋಟಿ ರೂ.ಗಳಲ್ಲಿ ಕೆರೆ ಸುತ್ತಲೂ ಫೆನ್ಸಿಂಗ್, ವಾಕಿಂಗ್ ಟ್ರ್ಯಾಕ್, ಶೌಚಗೃಹ, ಕಾರಂಜಿ ಮತ್ತಿತರ ಕಾಮಗಾರಿಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಕೆರೆ ಸುತ್ತಲೂ ಸಿಸಿ ಕ್ಯಾಮರಾ ಅಳವಡಿಸಲಾಗುವುದು ಎಂದರು.
    ಕೆರೆ ಅಭಿವೃದ್ಧಿ ಜವಾಬ್ದಾರಿಯನ್ನು ಲ್ಯಾಂಡ್ ಆರ್ಮಿ, ಲೋಕೋಪಯೋಗಿ ಇಲಾಖೆ, ನಿರ್ಮಿತಿ ಕೇಂದ್ರ ವಹಿಸಿಕೊಂಡಿದ್ದು ನಗರಸಭೆ ಇದರ ಮೇಲುಸ್ತುವಾರಿ ನೋಡಿಕೊಳ್ಳಲಿದೆ. ಕೆರೆ ಕಾಮಗಾರಿಗಳಿಗೆ ಅನುದಾನ ಕೊರತೆಯಾದರೆ ಮುಂದಿನ ವರ್ಷದೊಳಗೆ ಹೆಚ್ಚುವರಿಯಾಗಿ ಮತ್ತೆ 10 ಕೋಟಿ ರೂ. ಮಂಜೂರು ಮಾಡಿಸಲಾಗುವುದು ಎಂದು ತಿಳಿಸಿದರು.
    ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತ ನಾಗರಾಜಯ್ಯ, ಜಗದೀಶಯ್ಯ, ಪರಶುರಾಮ್, ಶ್ರೀಪಾದ್, ಜಿಪಂ ಕಾರ್ಯಪಾಲಕ ಅಭಿಯಂತ ಹಾಲೇಶಪ್ಪ, ನಿರ್ಮಿತಿ ಕೇಂದ್ರದ ನಾಗರಾಜ್, ಪೌರಾಯುಕ್ತ ರಾಜು ಡಿ.ಬಣಕಾರ್, ಸಹಾಯಕ ಕಾರ್ಯಪಾಲಕ ಅಭಿಯಂತ ಎಚ್.ಕೆ.ನಾಗಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts