More

    ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಿದ್ಧ

    ಕೊಡೇಕಲ್: ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ಬಸವಸಾಗರ ಜಲಾಶಯ ಭರ್ತಿಯಾಗಿ ಪ್ರವಾಹ ಪರಿಸ್ಥಿತಿ ಉಂಟಾದರೆ ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಹೇಳಿದರು.

    ಬಸವಸಾಗರ ಜಲಾಶಯಕ್ಕೆ ಮಂಗಳವಾರ ಭೇಟಿ ನೀಡಿದ ಅವರು, ನಿರಂತರ ಮಳೆಯಿಂದ ಆಲಮಟ್ಟಿ ಮತ್ತು ಬಸವಸಾಗರ ಜಲಾಶಯಗಳಿಗೆ ಒಳಹರಿವು ಹೆಚ್ಚಿದೆ. ಪ್ರವಾಹ ಪರಿಸ್ಥಿತಿ ನಿರ್ಮಾಣವಾದಲ್ಲಿ ನಿಭಾಯಿಸಲಾಗುವುದು ಎಂದರು.

    ನಂತರ ಗೇಟ್‌ನ ಕೋಣೆಗೆ ತೆರಳಿ ಅಧಿಕಾರಿಗಳಿಂದ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಮಾಹಿತಿ ಪಡೆದ ಅವರು, ಜಲಾಶಯ ಭರ್ತಿಯಾದರೆ ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸಿ ನದಿ ತೀರದ ಗ್ರಾಮಸ್ಥರಲ್ಲಿ ತಿಳಿವಳಿಕೆ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಕೃಷ್ಣಾ ಭಾಗ್ಯ ಜಲನಿಗಮದ ಮುಖ್ಯ ಅಭಿಯಂತರ ಆರ್.ಮಂಜುನಾಥ, ಎಇಇ ಪ್ರಭಾಕರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts