More

    ಪ್ರವಾಹ ನಿರ್ವಹಣೆಗೆ ಸಿದ್ಧರಾಗಿ

    ಗೋಕಾಕ: ಕಳೆದ ಎರಡು ವರ್ಷಗಳಲ್ಲಿ ಉಂಟಾದ ಪ್ರವಾಹ ಹಾಗೂ ನೆರೆಯಿಂದ ಈ ಭಾಗದ ಜನರು ಅನೇಕ ಸಮಸ್ಯೆ ಅನುಭವಿಸಿದ್ದು, ಬದುಕು ಕಟ್ಟಿಕೊಳ್ಳಲು ಇನ್ನೂ ಪರದಾಡುತ್ತಿದ್ದಾರೆ. ಕಳೆದ ಬಾರಿಯಂತೆ ಪ್ರಸಕ್ತ ಸಾಲಿನಲ್ಲಿ ಯಾವುದೇ ಸಮಸ್ಯೆ ಆಗದಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಸೂಚಿಸಿದರು.

    ಪ್ರವಾಹ ನಿರ್ವಹಣೆ ಕುರಿತು ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಕೊಯ್ನ ಜಲಾಶಯದಿಂದ ಬರುವ ನೀರಿನ ಮಟ್ಟಕ್ಕೆ ಅನುಗುಣವಾಗಿ ರಾಜಾಪುರ, ಕಲ್ಲೋಳ ಬ್ಯಾರೇಜ್ ಮತ್ತು ಆಲಮಟ್ಟಿ ಜಲಾಶಯಗಳಿಂದ ನೀರು ಹೊರಬಿಡಬೇಕು. ಇದರಿಂದ ಸಂಭವನೀಯ ಪ್ರವಾಹ, ಹಾನಿ ತಪ್ಪಿಸಬಹುದು ಎಂದರು.

    ಪ್ರವಾಹ ನಿರ್ವಹಣೆ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಹಾರಾಷ್ಟ್ರದ ನೀರಾವರಿ ಸಚಿವರೊಂದಿಗೆ ಚರ್ಚಿಸಲಾಗಿದೆ. ಅಲ್ಲಿನ ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ನೀಡಲು ಕೋರಲಾಗಿದೆ. ಪ್ರವಾಹ ಬಂದರೆ ಜನರ ಸ್ಥಳಾಂತರದ ಕುರಿತು ಅಧಿಕಾರಿಗಳೊಂದಿಗೆ ಶೀಘ್ರ ಉನ್ನತ ಮಟ್ಟದ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

    ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ, ತಾಲೂಕಿನಲ್ಲಿ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ನೋಡಲ್ಅ ಧಿಕಾರಿಗಳನ್ನು ನಿಯೋಜಿಸಲಾಗುವುದು. ಗ್ರಾಪಂ ಮಟ್ಟದಲ್ಲಿ ಟಾಸ್ಕ್‌ಪೋರ್ಸ್ ರಚಿಸಲಾಗಿದೆ. ಪರಿಹಾರ ಕೇಂದ್ರಗಳನ್ನು ತೆರೆಯುವ ಸಲುವಾಗಿ ಸರ್ಕಾರಿ ಶಾಲೆ, ಕಚೇರಿ ಗುರುತಿಸಲಾಗಿದೆ ಎಂದರು.

    ಉಪವಿಭಾಗಾಧಿಕಾರಿ ಶಶಿಧರ ಬಗಲಿ, ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ, ಡಿವೈಎಸ್‌ಪಿ ಮನೋಜಕುಮಾರ ನಾಯಿಕ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಪೌರಾಯುಕ್ತ ಶಿವಾನಂದ ಹಿರೇಮಠ, ಸಿಪಿಐ ಗೋಪಾಲ ರಾಠೋಡ, ಡಾ.ರವೀಂದ್ರ ಅಂಟಿನ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts