More

    ಪ್ರವಾಹ ಪರಸ್ಥಿತಿ ಸಮರ್ಪಕವಾಗಿ ನಿಭಾಯಿಸಿ

    ಯಾದಗಿರಿ: ಪಕ್ಕದ ಮಹಾರಾಷ್ಟ್ರ ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯ ಕೃಷ್ಣಾ ಮತ್ತು ಭೀಮಾ ನದಿಗಳಿಗೆ ಬರಬಹುದಾದ ಪ್ರವಾಹ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಈಗಿನಿಂದಲೇ ಸಿದ್ಧತೆ ಮಾಡುಕೊಳ್ಳುವಂತೆ ಜಿಲ್ಲಾಕಾರಿ ಡಾ.ಸುಶೀಲಾ ಬಿ., ಸಂಬಂಸಿದ ಅಕಾರಿಗಳಿಗೆ ಸೂಚನೆ ನೀಡಿದ್ದಾರೆ.


    ಮಂಗಳವಾರ ಸಂಜೆ ನಗರದ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಕಾರದ ಸಭೆಯಲ್ಲಿ ಮಾತನಾಡಿ, ಮಳೆ ಹಿನ್ನೆಲೆಯಲ್ಲಿ ಮುಂದಿನ 15 ದಿನಗಳಲ್ಲಿ ಆಲಮಟ್ಟಿ, ನಾರಾಯಣಪುರ ಜಲಾಶಯಗಳು ಭತರ್ಿಯಾಗಿ ನೀರಿನ ಹೊರಹರಿವು ಹೆಚ್ಚಾಗಲಿದೆ. ಆ ಸಂದರ್ಭದಲ್ಲಿ ತುತರ್ಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ. ಉಭಯ ನದಿ ತೀರಗಳ ವ್ಯಾಪ್ತಿಯಲ್ಲಿ ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಕಾರಿಗಳು ಈಗಿನಿಂದಲೇ ಸನ್ನದ್ಧರಾಗಬೇಕು ಎಂದು ನಿದರ್ೇಶನ ನೀಡಿದರು.


    ಸದ್ಯ ಯಾವುದೇ ರೀತಿಯ ಪ್ರವಾಹದ ಭೀತಿ ಇಲ್ಲದಿದ್ದರೂ ಕೂಡ, ಮುಂದಿನ 15 ದಿನಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿ ಕೃಷ್ಣಾ ಮತ್ತು ಭೀಮಾ ನದಿ ನೀರು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಅದರಂತೆ ಜಿಲ್ಲೆಯಲ್ಲಿ ಮುಂದಿನ 3 ದಿನಗಳವರೆಗೆ ಭಾರಿ ಮಳೆಯ ಕುರಿತು ಯಲ್ಲೋ ಅಲಟರ್್ ಘೋಷಣೆ ಮಾಡಲಾಗಿದೆ. ಸಾರ್ವಜನಿಕರು, ನದಿ ಪಾತ್ರದ ಜನರು ಹಾಗೂ ಜಾನುವಾರುಗಳಿಗೆ ತೊಂದರೆ ಯಾಗದಂತೆ ಅವಶ್ಯಕ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದರು.


    ಈ ಹಿಂದಿನ ವರ್ಷಗಳಲ್ಲಿ ಪ್ರವಾಹ ಸಂದರ್ಭಗಳಲ್ಲಿ ಬಾತವಾಗಿದ್ದ 80 ಗ್ರಾಮಗಳ ಸಧ್ಯದ ಸ್ಥಿತಿಗಳನ್ನು ಅರಿತುಕೊಳ್ಳಬೇಕು. ಪ್ರವಾಹ ಸ್ಥಿತಿ ನಿಭಾಯಿಸಲು ನೋಡಲ್ ಅಕಾರಿಗಳನ್ನು ನೇಮಿಸಲಾಗಿದ್ದು, ಆಯಾ ತಾಲೂಕಿನ ತಹಸೀಲ್ದಾರರು, ತಾಪಂ ಇಒಗಳು ಲೋಕೋಪಯೋಗಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಕಾರಿಗಳು, ಅಭಿಯಂತರರು ಮತ್ತು ಪೊಲೀಸ್ ಇಲಾಖೆ ಸೇರಿ ಸಂಬಂಧ ಪಟ್ಟ ಅಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಯಾವುದೇ ಜೀವಹಾನಿ ಆಗದಂತೆ ಮುಂಜಾಗ್ರತೆ ವಹಿಸಬೇಕು ಎಂದು ಹೇಳಿದರು.


    ಪ್ರತಿ ಹೋಬಳಿವಾರು ನೇಮಿಸಿದ ನೋಡಲ್ ಅಕಾರಿಗಳು ಕೂಡ ಈ ಎರಡು ನದಿ ಪಾತ್ರದ ವ್ಯಾಪ್ತಿಯಲ್ಲಿ ಸೂಕ್ತ ನಿಗಾ ವಹಿಸಬೇಕು. ನಾರಾಯಣಪುರ ಹಾಗೂ ಸನ್ನತಿ, ಗುರಸಣಗಿ ಬ್ಯಾರೇಜ್ಗಳ ನೀರು ನಿರ್ವಹಣೆ ಹಾಗೂ ನಿಗಾಕ್ಕೆ ನೇಮಿಸಿರುವ ನೋಡಲ್ ಅಕಾರಿಗಳು ಸೂಕ್ತ ಗಮನ ನೀಡಬೇಕು. ನಗರ, ಪಟ್ಟಣದ ಹಾಗೂ ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿ ಒಳ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ನೀರು ಸರಾಗವಾಗಿ ಹರಿದು ಹೋಗುವಂತೆ ಚರಂಡಿಗಳ ತ್ಯಾಜ್ಯ ಬೇರೆ ಕಡೆ ಸ್ಥಳಾಂತರಿಸಲು ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.


    ಜಿಪಂ ಸಿಇಒ ಗರೀಮಾ ಪನ್ವಾರ ಮಾತನಾಡಿ, ಮುಂದಿನ ದಿನಗಳಲ್ಲಿ ಪ್ರವಾಹ ಬಂದಲ್ಲಿ ಬಾತವಾಗುವ ಗ್ರಾಮಗಳ, ಸೇತುವೆ,ಅಪಾಯಕಾರಿ ರಸ್ತೆ ಗಳ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕಾ ಫಲಕ ಅಥವಾ ಅಪಾಯ ತೋರಿಸುವ ಚಿಹ್ನೆಗಳನ್ನು ಅಳವಡಿಸಬೇಕು. ತಾಲೂಕು ಹಾಗೂ ಹೋಬಳಿ ವ್ಯಾಪ್ತಿಯಲ್ಲಿ ಪ್ರವಾಹ ಎದುರಿಸಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.


    ಅಪರ ಜಿಲ್ಲಾಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ, ಡಿವೈಎಸ್ಪಿ ಬಸವೇಶ್ವರ, ಕೃಷಿ ಜಂಟಿ ನಿದರ್ೇಶಕ ಅಭೀದ್ ಎಸ್., ಜೆಸ್ಕಾಂ ಇಇ ಡಿ.ರಾಘವೇಂದ್ರ, ಪೌರಾಯುಕ್ತರು ಸಂಗಪ್ಪ ಉಪಾಸೆ ಸಭೆಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts