More

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಇಬ್ಬರು ಆರೋಪಿಗಳ ಬಂಧನ

    ಪುತ್ತೂರು: ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮಂಗಳೂರಿನಲ್ಲಿ ತಿಳಿಸಿದ್ದಾರೆ. ಈ ಮೂಲಕ ಈ ಪ್ರಕರಣದಡಿ ಒಟ್ಟು ಬಂಧಿತರ ಸಂಖ್ಯೆ 4ಕ್ಕೆ ಏರಿದೆ.
    ರಾಜ್ಯ ಗುಪ್ತಾಚಾರ ವಿಭಾಗದ ಅಧಿಕಾರಿಗಳು ನೀಡಿದ ಮಾಹಿತಿಯಂತೆ ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಬೆಳ್ಳಾರೆ ಪಲ್ಲಿಮಜಲು ನಿವಾಸಿಗಳಾದ ಸದ್ದಾಂ (32), ಹಾರಿಸ್ (42) ಎಂದು ಗುರುತಿಸಲಾಗಿದೆ. ಬೆಳ್ಳಾರೆ ಹಾಗೂ ಸವಣೂರು ನಿವಾಸಿಗಳಾದ ಶಫೀಕ್ ಹಾಗೂ ಜಾಕಿರ್‌ನನ್ನು ಜು. 28 ರಂದು ಬಂಧಿಸಲಾಗಿತ್ತು. ಅದೇ ದಿನ ಅವರನ್ನು ನ್ಯಾಯಲಯಕ್ಕೆ ಹಾಜರುಪಡಿಸಲಾಗಿದ್ದು ಅವರಿಗೆ ನ್ಯಾಯಲಯವು ನ್ಯಾಯಂಗ ಬಂಧನ ವಿಧಿಸಿತ್ತು . ಮರುದಿನ ಮತ್ತೆ ಪೊಲೀಸರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಕೇಳಿದ್ದು, ನ್ಯಾಯಲಯವು ಅನುಮತಿ ನೀಡಿತ್ತು . ಬಳಿಕ ಆರೋಪಿಗಳನ್ನು ಅಜ್ಙಾತ ಸ್ಥಳದಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಅವರು ಸದ್ದಾಂ ಹಾಗೂ ಹಾರಿಸ್ ಕೃತ್ಯದಲ್ಲಿ ಭಾಗಿಯಾಗಿರುವ ಮಾಹಿತಿ ನೀಡಿದ್ದಾರೆ. ಆರೋಪಿಗಳು ನೀಡಿದ ಮಾಹಿತಿಯನ್ನು ಆಧರಿಸಿ ಸದ್ದಾಂ ಹಾಗೂ ಹಾರಿಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಈ ಆರೋಪಿಗಳು ಕೃತ್ಯದಲ್ಲಿ ಭಾಗಿಯಾದ ಹಾಗೂ ಅವರಿಗೆ ಸಹಕರಿಸಿದ ಇತರ ಆರೋಪಿಗಳ ಮಾಹಿತಿ ನೀಡಿದ್ದು ಅವರನ್ನು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts