More

    ಪ್ರವೀಣ್ ನೆಟ್ಟಾರು ಹಾಗೂ ಮಸೂದ್ ಕೊಲೆ ಪ್ರಕರಣಗಳ ಸಮಗ್ರ ತನಿಖೆ

    ಪುತ್ತೂರು: ಪ್ರವೀಣ್ ನೆಟ್ಟಾರು ಹಾಗೂ ಮಸೂದ್ ಕೊಲೆ ಪ್ರಕರಣಗಳ ಸಮಗ್ರ ತನಿಖೆ ಪ್ರಗತಿಯಲ್ಲಿ ನಡೆಯುತ್ತಿದ್ದು, ಈಗಾಗಲೇ ಹಲವರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
    ಗುರುವಾರ ಬೆಳ್ಳಾರೆ ಠಾಣೆಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ನಿರಂತರ ಸಂಪರ್ಕದಲ್ಲಿದೆ. ಪ್ರಕರಣ ಎನ್‌ಐಎಗೆ ಹಸ್ತಾಂತರ ಆಗುವ ವರೆಗೆ ನಾವು ತಣಿಖೆ ನಡೆಸುತ್ತೇವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಜನ ಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಜಿಲ್ಲೆಯಲ್ಲಿ ಯಾವುದೇ ಏನೂ ಸಮಸ್ಯೆ ಇಲ್ಲ. ಎಲ್ಲಾ ಕಡೆ ನಿಗಾ ವಹಿಸಿದ್ದೇವೆ. ಒಳ್ಳೆಯ ಜನರೊಂದಿಗೆ ಒಳ್ಳೆಯ ರೀತಿಯಲ್ಲಿ ಇರಬೇಕು. ಯಾರು ತರ‌್ಲೆ ಮಾಡುತ್ತಾರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೆವೆ ಎಂದರು.
    ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಎಲ್ಲರೂ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಕಡೆ ನಿಗಾ ವಹಿಸುತ್ತಿದ್ದೇವೆ. ಅಹಿತಕರ ಘಟನೆ ನಿಯಂತ್ರಿಸುವ ಸಲುವಾಗಿ ಸಂಜೆ ಗಂಟೆ 6 ರಿಂದ ಬೆಳಗ್ಗೆ 6ರ ವರೆಗೆ ಹಾಕಿರುವ ನಿರ್ಬಂಧಗಳನ್ನು ಹಂತಹಂತವಾಗಿ ತೆರವು ಮಾಡಲಾಗುವುದು, ಅದರೊಂದಿಗೆ ದ್ವಿಚಕ್ರವಾಹನಗಳಲ್ಲಿ ಸಂಚರಿಸುವ ಸಹಸವಾರರ ಮೇಲೆ ಹೆಚ್ಚಿನ ನಿಗಾ ಇರಿಸಲಾಗುವುದು. ಸಹಸವಾರರು ಅನೇಕ ಬಾರಿ ಅಪರಾಧಗಳಲ್ಲಿ ಭಾಗಿಯಾಗುವುದು ಜಾಸ್ತಿ ಕಂಡುಬಂದಿದೆ. ಇತರ ರಾಜ್ಯಗಳ ಮಾದರಿಯಲ್ಲಿ ಇಲ್ಲಿಯೂ ಅವರ ಮೇಲೆ ನಿಗಾ ಇರಿಸಲಾಗುತ್ತದೆ ಎಂದರು.
    ಐಜಿಪಿ ದೇವಜ್ಯೋತಿ ರೇ, ದ.ಕ. ಜಿಲ್ಲಾ ಎಸ್ಪಿ ಋಷಿಕೇಶ್ ಸೊನಾವಣೆ, ಎಡಿಷನಲ್ ಎಸ್ಪಿ ಕುಮಾರಚಂದ್ರ ಉಪಸ್ಥಿತರಿದ್ದರು.
    ಮಾಹಿತಿ ಪಡೆದ ಎಡಿಜಿಪಿ ಅಲೋಕ್: ದ.ಕ. ಜಿಲ್ಲೆಯಲ್ಲಿನ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ನಡೆಯುತ್ತಿರುವ ತನಿಖೆ, ಬಂದೋಬಸ್ತ್ ಹಾಗೂ ಶಾಂತಿ ಸುವ್ಯವಸ್ಥೆ ಕುರಿತಂತೆ ಮಂಗಳೂರು ಕಮಿಷನರೇಟ್, ದ.ಕ. ಮತ್ತು ಉಡುಪಿ ಜಿಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆದ ಬಳಿಕ ಸುಳ್ಯ, ಬೆಳ್ಳಾರೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಈ ನಡುವೆ ಪುತ್ತೂರು ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಠಾಣಾ ಇನ್‌ಸ್ಪೆಕ್ಟರ್‌ವರಿಂದ ಪುತ್ತೂರಿನಲ್ಲಿ ಹಲವು ಪ್ರಕರಣದಲ್ಲಿ ಭಾಗಿಯಾಗಿರುವವರ ಮಾಹಿತಿ ಪಡೆದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts