More

    ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಬದ್ದ

    ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗ ಸೇರಿ ರಾಜ್ಯದಲ್ಲಿರುವ ಪ್ರಾದೇಶಿಕ ಅಸಮತೋಲನೆ ಸಂಪೂರ್ಣವಾಗಿ ಹೋಗಲಾಡಿಸಲು ಕಟಿಬದ್ಧರಾಗಿದ್ದೇವೆ. ಈ ನಿಟ್ಟಿನಲ್ಲಿ ಡಾ.ನಂಜುಂಡಪ್ಪ ಸಮಿತಿ ಶಿಫಾರಸ್ಸಿನಂತೆ ಎಲ್ಲ ಹಿಂದುಳಿದ ತಾಲೂಕುಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
    ರಾಜ್ಯ ಸರ್ಕಾರವು ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸೋಮವಾರ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿದ್ದ ಸಾಧನ ಸಮಾರಂಭ ಮತ್ತು ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಸವಾಲುಗಳ ಒಂದು ವರ್ಷ- ಪರಿಹಾರದ ಸ್ಪರ್ಶ ಸರ್ಕಾರದ ಪ್ರಗತಿ ಹೊತ್ತಿಗೆ ಬಿಡುಗಡೆ ಮಾಡಿ ವರ್ಚುವೆಲ್ ವೇದಿಕೆ (ಆನ್ಲೈನ್) ಮೂಲಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.
    ಈ ಕಾರ್ಯಕ್ರಮದ ನೇರಪ್ರಸಾರ ವ್ಯವಸ್ಥೆಯನ್ನು ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಜಿಲ್ಲೆಯ ಶಾಸಕರು, ಅಧಿಕಾರಿಗಳು, ಸಾರ್ವಜನಿಕರ ವೀಕ್ಷಣೆ ಮಾಡಿದರು.
    ಜನರ ಭಾವನೆಗೆ ಬೆಲೆಕೊಟ್ಟು ಹೈಕ ಎಂಬ ದಾಸ್ಯ ಪದ ತೆಗೆದು ಹಾಕಿ ವಿಶಾಲಾರ್ಥದಲ್ಲಿ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಲಾಗಿದೆ. ಬಸವರಾಜ ಪಾಟೀಲ ಸೇಡಂ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘ ರಚಿಸಿ 500 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಕಲ್ಯಾಣ ಕರ್ನಾಟಕದ ಪ್ರಗತಿಗೆ ಶಕ್ತಿಮೀರಿ ಶ್ರಮಿಸಲಾಗುವುದು ಎಂದು ಸಿಎಂ ತಿಳಿಸಿದರು.
    ಬಾಗಲಕೋಟೆಯಿಂದ ಆನ್ಲೈನ್ನಲ್ಲಿ ಭಾಗವಹಿಸಿದ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿಸಿಎಂ ಗೋವಿಂದ ಕಾರಜೋಳ ಮಾತನಾಡಿ, ಕಲಬುರಗಿ ಒಳಗೊಂಡಂತೆ ಕಲ್ಯಾಣ ಕರ್ನಾಟಕ ಸೂಫಿ-ಸಂತರ ನಾಡು ಹಾಗೂ ಶರಣರ ಬೀಡಾಗಿದೆ ಎಂದರು.
    ಕಲಬುರಗಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಕರ್ಾರದ ಒಂದು ವರ್ಷದ ಸಾಧನೆಯ ಪ್ರಗತಿ ಹೊತ್ತಿಗೆಯನ್ನು ಜಿಪಂ ಅಧ್ಯಕ್ಷೆ ಸುವರ್ಣ ಮಾಲಾಜಿ ಬಿಡುಗಡೆಗೊಳಿಸಿದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜನಪದ ಮತ್ತು ಮಾರ್ಚ್​ ಆಫ್ ಕರ್ನಾಟಕ ಮಾಸಿಕ ಸಂಚಿಕೆಯನ್ನು ಸಹ ಜನಪ್ರತಿನಿಧಿಗಳು ಬಿಡುಗಡೆಗೊಳಿಸಿದರು.
    ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಿ.ಜಿ.ಪಾಟೀಲ್,ಬಸವರಾಜ ಮತ್ತಿಮೂಡ, ಸುಭಾಷ ಗುತ್ತೇದಾರ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ, ಜಿಪಂ ಸದಸ್ಯ ಶಿವರಾಜ ಪಾಟೀಲ್ ರದ್ದೆವಾಡಗಿ, ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ, ಜಿಲ್ಲಾಧಿಕಾರಿ ಶರತ್ ಬಿ., ಪೊಲೀಸ್ ಆಯುಕ್ತ ಎನ್. ಸತೀಶಕುಮಾರ, ಎಸ್ಪಿ ಯಡಾ ಮಾರ್ಟಿನ್​ ಮಾರ್ಬನ್ಯಾಂಗ್, ಸಿಇಒ ಡಾ.ಪಿ.ರಾಜಾ, ಡಿಸಿಪಿ ಕಿಶೋರ ಬಾಬು, ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಐಎಎಸ್ ಪ್ರೊಬೇಷನರ್ ಅಧಿಕಾರಿ ಆಕಾಶ ಸೇರಿದಂತೆ ವಿವಿಧ ಅಧಿಕಾರಿಗಳು, ಫಲಾನುಭವಿಗಳು ಇದ್ದರು.
    ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಸ್ವಾಗತಿಸಿದರೆ, ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ. ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts