More

    ಪ್ರೌಢಶಾಲೆ, ಪಿಯು ತರಗತಿ ಇಂದಿನಿಂದ

    ಧಾರವಾಡ: ಕರೊನಾ 1 ಮತ್ತು 2ನೇ ಅಲೆಯಿಂದ ಸ್ತಬ್ಧಗೊಂಡಿದ್ದ ಶಾಲೆ- ಕಾಲೇಜುಗಳಲ್ಲಿ ಇಂದಿನಿಂದ ಮಕ್ಕಳ ಕಲರವ ಕೇಳಿಬರಲಿದೆ. 9-10 ಹಾಗೂ ಪಿಯುಸಿ 1, 2 ತರಗತಿಗಳು ಸೋಮವಾರದಿಂದ ಆರಂಭಗೊಳ್ಳಲಿವೆ. ಸರ್ಕಾರಿ ಹಾಗೂ ಖಾಸಗಿ ಶಾಲೆ- ಕಾಲೇಜುಗಳಲ್ಲಿ ಕಳೆದ 2 ದಿನಗಳಿಂದ ಅಗತ್ಯ ಸಿದ್ಧತಾ ಕಾರ್ಯ ಪೂರ್ಣಗೊಂಡಿದೆ.

    ಕೋವಿಡ್ 2ನೇ ಅಲೆಯ ತೀವ್ರತೆ ಕೊಂಚ ಕಡಿಮೆಯಾದ ಹಿನ್ನೆಲೆಯಲ್ಲಿ 9ರಿಂದ ದ್ವಿತೀಯ ಪಿಯುಸಿವರೆಗೆ ತರಗತಿ ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ. ಕೋವಿಡ್ ನಿಯಮಾವಳಿ ಪಾಲನೆಯನ್ನು ಕಡ್ಡಾಯಗೊಳಿಸಲಾಗಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ. ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಿ ಅಗತ್ಯ ಸುರಕ್ಷತೆ ಕೈಗೊಳ್ಳಲು ಸೂಚಿಸಿದ್ದಾರೆ.

    ಡಿಡಿಪಿಐ ಮೋಹನಕುಮಾರ ಹಂಚಾಟೆ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭೆ ಜರುಗಿಸಲಾಗಿದೆ. ಶಾಲೆಯ ಆವರಣವನ್ನು ಸ್ವಚ್ಛಗೊಳಿಸುವುದು ಹಾಗೂ ಎಲ್ಲ ವರ್ಗಕೋಣೆಗಳನ್ನು ಸ್ಯಾನಿಟೈಸ್ ಮಾಡಲು ಸೂಚಿಸಿದ್ದರು. ಅದರಂತೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಅಗತ್ಯ ಕ್ರಮ ಕೈಗೊಂಡಿದ್ದು, ಮಕ್ಕಳ ಸ್ವಾಗತಕ್ಕೆ ಸಜ್ಜಾಗಿವೆ.

    ತರಗತಿಗೆ 20 ವಿದ್ಯಾರ್ಥಿಗಳು

    ಕೋವಿಡ್ ನೂತನ ನಿಯಮಾವಳಿಯಂತೆ ಪ್ರತಿ ತರಗತಿಗೆ 20 ವಿದ್ಯಾರ್ಥಿಗಳಿಗೆ ಮಾತ್ರ ಕುಳಿತುಕೊಳ್ಳಲು ಅವಕಾಶ ಕಲ್ಪಿಸುವಂತೆ ಸೂಚಿಸಲಾಗಿದೆ. ಹೈಸ್ಕೂಲ್ ಹಾಗೂ ಕಾಲೇಜುಗಳ ತರಗತಿಗಳು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿವೆ. ಶಾಲೆ- ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುವ ಶಿಕ್ಷಕರು, ಸಿಬ್ಬಂದಿಗೆ ಕೋವಿಡ್ 2ನೇ ಡೋಸ್ ಕಡ್ಡಾಯಗೊಳಿಸಲಾಗಿದೆ. ಪ್ರತಿ ವಿದ್ಯಾರ್ಥಿಯನ್ನು ಥರ್ಮಲ್ ಸ್ಕ್ಯಾನಿಂಗ್​ಗೆ ಒಳಪಡಿಸುವುದು ಹಾಗೂ ಮಾಸ್ಕ್ ನೀಡುವ ವ್ಯವಸ್ಥೆ ಮಾಡಲಾಗಿದೆ.

    ಪ್ರೌಢಶಾಲೆ-ಕಾಲೇಜುಗಳ ಆರಂಭಕ್ಕೆ ಸಿದ್ಧತಾ ಕಾರ್ಯ ಪೂರ್ಣಗೊಂಡಿದೆ. ಹಾಜರಾಗುವ ಮಕ್ಕಳು ಪಾಲಕರಿಂದ ಅನುಮತಿ ಪತ್ರ ತರುವುದನ್ನು ಕಡ್ಡಾಯಗೊಳಿಸಲಾಗಿದೆ. ತರಗತಿಗೆ ಹಾಜರಾಗದ ಮಕ್ಕಳಿಗೆ ಮಧ್ಯಾಹ್ನದ ನಂತರ ನಡೆಯುವ ಆನ್​ಲೈನ್ ಕ್ಲಾಸ್​ಗೆ ಭಾಗವಹಿಸಲು ಅವಕಾಶವಿದೆ.

    | ಮೋಹನಕುಮಾರ ಹಂಚಾಟೆ, ಡಿಡಿಪಿಐ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts