More

    ಪ್ಲಾಸ್ಟಿಕ್ ನಿಷೇಧಕ್ಕೆ ಕಟ್ಟುನಿಟ್ಟಿನ ಕ್ರಮವಹಿಸಿ

    ಬೆಳಗಾವಿ: ಮಹಾನಗರ ಪಾಲಿಕೆ ಸೇರಿ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉತ್ಪಾದನೆ ಮತ್ತು ಮಾರಾಟವಾಗದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಶಾಂತ ಎ.ತಿಮ್ಮಯ್ಯ ಸೂಚಿಸಿದರು. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ಲಾಸ್ಟಿಕ್ ನಿಷೇಧ ಕಾಯ್ದೆ ತಿದ್ದುಪಡಿ ಅನುಷ್ಠಾನ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ. ಹಾಗಾಗಿ, ಎಲ್ಲ ಪ್ಲಾಸ್ಟಿಕ್ ಉತ್ಪಾದನಾ ಘಟಕಗಳು, ಅಂಗಡಿ ಮಾಲೀಕರಿಗೆ ಏಕಬಳಕೆ ಪ್ಲಾಸ್ಟಿಕ್ ಉತ್ಪಾದನೆ ಹಾಗೂ ಮಾರಾಟ ಮಾಡದಂತೆ ಎಚ್ಚರಿಕೆ ನೀಡಬೇಕು ಎಂದರು.

    ಬೆಳಗಾವಿ ಮಹಾನಗರ ಪಾಲಿಕೆ, ಪುರಸಭೆ, ನಗರಸಭೆ, ಪಪಂ ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧದ ನಡುವೆಯೂ ಹಲವೆಡೆ ಏಕ ಬಳಕೆ ಪ್ಲಾಸ್ಟಿಕ್ ಬಳಕೆಯಾಗುತ್ತಿದೆ. ಭವಿಷ್ಯದಲ್ಲಿ ಇದು ಕೆಟ್ಟ ಪರಿಣಾಮ ಉಂಟು ಮಾಡಲಿದೆ ಎಂದರು.

    ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಡಾ.ಈಶ್ವರ ಉಳ್ಳಾಗಡ್ಡಿ, ಜಿಲ್ಲಾ ಪರಿಸರ ಅಧಿಕಾರಿ ಜಗದೀಶ.ಎಚ್. ಉಪ ಪರಿಸರ ಅಧಿಕಾರಿ ರಾಜಶ್ರೀ ಕುಳ್ಳಿ, ನಗರ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಅಂಗಡಿಗಳ ಮಾಲೀಕರು ಹಾಗೂ ವ್ಯಾಪಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts