More

    ಪ್ಲಾಸ್ಟಿಕ್ ಬಳಸಿದರೆ ನಿರ್ದಾಕ್ಷಿಣ್ಯ ಕ್ರಮ

    ಬೇಲೂರು: ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿದ್ದರೂ ಇನ್ನೂ ಕೆಲವು ಅಂಗಡಿ-ಮುಂಗಟ್ಟುಗಳಲ್ಲಿ ಪ್ಲಾಸ್ಟಿಕ್ ಬಳಕೆ ಕಂಡು ಬರುತ್ತಿದ್ದು, ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ಹೇಳಿದರು.

    ಪಟ್ಟಣದ ವಿವಿಧ ಅಂಗಡಿಗಳಿಗೆ ಬುಧವಾರ ಬೆಳಗ್ಗೆ ಅಧಿಕಾರಿಗಳೊಂದಿಗೆ ದಿಢೀರ್ ದಾಳಿ ನಡೆಸಿ, ಶೇಖರಿಸಿಟ್ಟಿದ್ದ ಪ್ಲಾಸ್ಟಿಕ್ ಚೀಲಗಳನ್ನು ವಶಕ್ಕೆ ಪಡೆದು, ನಂತರ ಮಾತನಾಡಿದ ಅವರು, ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಹಾಗೂ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಜತೆಗೆ ಪ್ಲಾಸ್ಟಿಕ್ ಬಳಸಿ ಎಲ್ಲೆಂದರಲ್ಲಿ ಬಿಸಾಕುವುದರಿಂದ ದನಕರುಗಳು ತಿಂದರೆ ಅವುಗಳ ಆರೋಗ್ಯ ಹದಗೆಟ್ಟು ಸಾವನಪ್ಪುತ್ತವೆ. ಜತೆಗೆ ಪರಿಸರಕ್ಕೆ ಹಾನಿ ಮಾಡುತ್ತದೆ ಎಂಬ ನಿಟ್ಟಿನಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಸರ್ಕಾರ ಆದೇಶಿಸಿದೆ. ಅಲ್ಲದೆ ಸರ್ಕಾರದ ಮಾರ್ಗಸೂಚಿಯಂತೆ ಪ್ಲಾಸ್ಟಿಕ್ ವಶಕ್ಕೆ ಪಡೆದು ಅರಿವು ಮೂಡಿಸಲಾಗುತ್ತಿದೆ ಎಂದರು.

    ಕೆಲವರು ಹಣದಾಸೆಗಾಗಿ ಕದ್ದುಮುಚ್ಚಿ ಪ್ಲಾಸ್ಟಿಕ್ ಬಳಸುತ್ತಿರುವ ಬಗ್ಗೆ ಆರೋಪ ಬಂದ ಕಾರಣ ದಾಳಿ ನಡೆಸಿ ವಶಕ್ಕೆ ಪಡೆಯುತ್ತಿದ್ದೇವೆ. ಸಾರ್ವಜನಿಕರು ವಸ್ತುಗಳನ್ನು ತರುವ ಸಂದರ್ಭ ಬಟ್ಟೆ ಬ್ಯಾಗ್‌ಗಳನ್ನು ಬಳಸುವುದು ಸೂಕ್ತ. ಈ ಮೊದಲೇ ಅಂಗಡಿ ಮಾಲೀಕರಿಗೆ ತಿಳಿ ಹೇಳಿ ಕಡಿಮೆ ದಂಡ ವಿಧಿಸಿದ್ದೆವು. ಆದರೆ ಅವರೇ ಪುನಃ ಕಾನೂನು ಮೀರಿ ಮಾರಾಟಕ್ಕಿಳಿದಿರುವುದರಿಂದ ಹೆಚ್ಚಿನ ಮೊತ್ತದ ದಂಡ ವಿಧಿಸುವುದಲ್ಲದೆ, ಅಂಗಡಿ ಪರವಾನಗಿಯನ್ನು ರದ್ದುಪಡಿಸುತ್ತೇವೆ. ಆದ್ದರಿಂದ ಇಂತಹ ಘಟನೆಗಳಿಗೆ ವರ್ತಕರು ಅವಕಾಶ ಕೊಡದೆ ನಿಯಮ ಪಾಲಿಸುವ ಮೂಲಕ ನಗರವನ್ನು ಸ್ವಚ್ಛವಾಗಿಡಲು ನಮ್ಮೊಂದಿಗೆ ಸಹಕಾರ ನೀಡಬೇಕು ಎಂದರು.

    ಪುರಸಭೆ ಉಪಾಧ್ಯಕ್ಷೆ ಜಮೀಲಾ ತೌಫಿಕ್, ಸದಸ್ಯ ಭರತ್, ಆರೋಗ್ಯಾಧಿಕಾರಿ ಜ್ಯೋತಿ, ಲೋಹಿತ್, ದಿನೇಶ್ ಹಾಗೂ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts