More

    ಪ್ಲಾಸ್ಟಿಕ್ ಮುಕ್ತ ಕೇಂದ್ರೀಯ ವಿದ್ಯಾಲಯ

    ವಿಜಯಪುರ: ವಿಜಯಪುರದ ಪ್ರತಿಷ್ಠಿತ ಕೇಂದ್ರೀಯ ವಿದ್ಯಾಲಯಕ್ಕೆ ಪ್ಲಾಸ್ಟಿಕ್ ಮುಕ್ತ ಶಾಲೆ ಪ್ರಶಸ್ತಿ ಲಭಿಸಿದೆ. ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಸಮಾರಂಭದಲ್ಲಿ ಕೇಂದ್ರೀಯ ವಿದ್ಯಾಲಯಕ್ಕೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಶಾಲೆಯ ಪ್ರಾಚಾರ್ಯ ಶ್ರೀ ಸಿ ಬಿ ಸಿಬೆಸ್ಟಿಯನ್ ಅವರ ಪರವಾಗಿ ಕಂಪ್ಯೂಟರ್ ಶಿಕ್ಷಕ ಬಸವರಾಜ ಪ್ರಶಸ್ತಿ ಸ್ವೀಕರಿಸಿದರು. ವಿಜಯಪುರ ನಗರದಲ್ಲಿರುವ ಐತಿಹಾಸಿಕ ಗೋಳಗುಮ್ಮಟದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದರೆಡ್ಡಿ ಪ್ರಶಸ್ತಿ ಪ್ರಧಾನ ಮಾಡಿದರು. ವಿಜಯಪುರದ ಕೇಂದ್ರೀಯ ವಿದ್ಯಾಲಯದಲ್ಲಿ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲದೇ ಇಲ್ಲಿ ಯಾವುದೇ ತರಹದ ಪ್ಲಾಸ್ಟಿಕ್ ನಿಂದ ತಯಾರಾದ ವಸ್ತುಗಳನ್ನು ಬಳಸುತ್ತಿಲ್ಲ. ಈ ಶಾಲೆಯ ಆವರಣ ಸಂಪೂರ್ಣ ಪ್ಲಾಸ್ಟಿಕ್ ಮುಕ್ತವಾಗಿದೆ. ಅಷ್ಟೇ ಅಲ್ಲದೆ ಈ ಶಾಲೆಯಲ್ಲಿ ಹಸಿರಿನಿಂದ ಕಂಗೊಳಿಸುತ್ತಿದೆ. ಇಲ್ಲಿರುವ ಸುಂದರವಾದ ಉದ್ಯಾನವನ್ನು ಚೆನ್ನಾಗಿ ನಿರ್ವಹಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಕೇಂದ್ರೀಯ ವಿದ್ಯಾಲಯಕ್ಕೆ ಸ್ವಚ್ಛ ಭಾರತ ಅಭಿಯಾನದಡಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗಿದೆ. ವಿದ್ಯಾಲಯದ ಶಿಕ್ಷಕ ವರ್ಗ, ಸಿಬ್ಬಂದಿ ವರ್ಗ ಸೇರಿದಂತೆ ಎಲ್ಲರೂ ಹರ್ಷ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts