More

    ಫಲಾನುಭವಿಗೆ ಉಚಿತ ವಿದ್ಯುತ್ ನೀಡಿ

    ಬೆಳಗಾವಿ: ಬಿಪಿಎಲ್ ಕಾರ್ಡ್‌ದಾರರಿಗೆ ಉಚಿತ ವಿದ್ಯುತ್ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನೇಗಿಲಯೋಗಿ ರೈತ ಸೇವಾ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

    ಈಗಾಗಲೇ ಸರ್ಕಾರವು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಎಸ್ಸಿ, ಎಸ್ಟಿ ಸಮುದಾಯದವರಿಗೆ 75 ಯುನಿಟ್‌ವರೆಗೆ ಉಚಿತವಾಗಿ ವಿದ್ಯುತ್ ನೀಡುತ್ತಿದೆ. ಅದೇ ಮಾದರಿಯಲ್ಲಿ ಬಿಪಿಎಲ್ ಕಾರ್ಡ್‌ದರಾರಿಗೂ ಉಚಿತ ವಿದ್ಯುತ್ ನೀಡಲು ಕ್ರಮ ವಹಿಸಬೇಕು. ಈ ವಿಷಯದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಪ್ಪು ನಿರ್ಧಾರದಿಂದ ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳು ಸರ್ಕಾರಿ ಸೌಲಭ್ಯಗಳಿಂದ ವಂಚಿತವಾಗುತ್ತಿವೆ ಎಂದು ದೂರಿದರು.

    ಉದ್ಯೋಗ ಸೃಷ್ಟಿಯ ನೆಪದಲ್ಲಿ ರಾಜ್ಯದ ಫಲವತ್ತಾದ ಕೃಷಿ ಭೂಮಿ,ನೀರು, ವಿದ್ಯುತ್ ಖಾಸಗೀಕರಣ ನೀತಿ ಕೈಬಿಡಬೇಕು. ಫಲವತ್ತಾದ ಕೃಷಿ ಜಮೀನುಗಳಲ್ಲಿ ರಸ್ತೆ, ಕೈಗಾರಿಕೆಗಳ ಸ್ಥಾಪನೆ ಸ್ವಾಧೀನಪಡಿಸಿಕೊಳ್ಳಬಾರದು. ಕೆಲ ಗ್ರಾಮಗಳಲ್ಲಿ ಒತ್ತಾಯ ಪೂರಕವಾಗಿ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುವ ಕೆಲಸ ನಡೆಯುತ್ತಿದ್ದು, ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

    ಕೇಂದ್ರ ಸರ್ಕಾರವು ಕುಲಾಂತರಿ ಸಾಸಿವೆಗೆ ಅನುಮತಿ ನೀಡಿದ್ದರಿಂದ ಕೃಷಿ, ಪರಿಸರ ವಲಯದ ಮೇಲೆ ಸಾಕಷ್ಟು ದುಷ್ಟಪರಿಣಾಮ ಉಂಟು ಮಾಡುತ್ತದೆ. ಹಾಗಾಗಿ ಕೂಡಲೇ ಕುಲಾಂತರಿ ಸಾಸಿವೆ ಅನುಮತಿ ವಾಪಸ್ ಪಡೆದುಕೊಳ್ಳಬೇಕು. ಈ ಕುಲಾಂತರಿ ಬೆಳಗಳಿಗೆ ಫಲವತ್ತಾದ ಕೃಷಿ ಭೂಮಿ ಸಂಪೂರ್ಣ ಹಾಳಾಗುತ್ತದೆ. ಇತರ ಬೆಳೆಗಳ ಮೇಲೆ ಕೆಟ್ಟ ಪರಿಣಾಮ ಉಂಟು ಮಾಡುತ್ತದೆ. ಇದರಿಂದ ರೈತರು, ಜನರು ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಕುಲಾಂತರಿ ಬೆಳೆಗಳನ್ನು ಬೆಳೆಯಲು ಅವಕಾಶ ನೀಡಬಾರದು ಎಂದು ಮನವಿ ಮೂಲಕ ಒತ್ತಾಯಿಸಿದರು. ಅಧ್ಯಕ್ಷ ರವಿ ಪಾಟೀಲ, ಮಲ್ಲಿಕಾರ್ಜುನ ಜಟ್ಟನವರ, ಗಂಗಯ್ಯ ಪೂಜಾರಿ, ಕಲ್ಲಪ್ಪ ಯರಿಯಾಳ, ಸುರೇಶ ವಾಲಿ, ಶಿವಪ್ಪ ಕುರಿ, ನಾಗಪ್ಪ ಕಳಸನ್ನವರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts