More

    ಫಲಿತಾಂಶ ಸುಧಾರಣೆಗೆ ಚಟುವಟಿಕೆ ಹಮ್ಮಿಕೊಳ್ಳಿ

    ಬೆಳಗಾವಿ: ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಮಂಡೋಳಿ ಪ್ರೌಢಶಾಲೆ ಸಹಯೋಗದಲ್ಲಿ ವಿಜ್ಞಾನ ಫೋರಂ ವತಿಯಿಂದ ಸೋಮವಾರ ಆಯೋಜಿಸಿದ್ದ ವಿಜ್ಞಾನ ಕಾರ್ಯಾಗಾರವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ದಾಸಪ್ಪನವರ ಉದ್ಘಾಟಿಸಿದರು.

    ಶಿಕ್ಷಕರನ್ನುದ್ದೇಶಿಸಿ ಮಾತನಾಡಿದ ಎಸ್.ಪಿ. ದಾಸಪ್ಪನವರ, ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಾಲೆಗಳಲ್ಲಿ ವಿವಿಧ ಚಟುವಟಿಕೆ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು. ಫಲಿತಾಂಶ ಸುಧಾರಣೆ ಕುರಿತು ಮಾರ್ಗದರ್ಶನ ನೀಡಿದರು.

    ವಿಜ್ಞಾನ ಸಂಘದ ಗೌರವ ಅಧ್ಯಕ್ಷ, ಮುಖ್ಯೋಪಾದ್ಯಾಯರ ಸಂಘದ ಅಧ್ಯಕ್ಷ ಎಸ್.ಎಸ್. ಮಠದ ಮಾತನಾಡಿ, ಈ ವರ್ಷ ಗ್ರಾಮೀಣ ವಲಯದ ಎಸ್.ಎಸ್.ಎಲ್.ಸಿ. ಫಲಿತಾಂಶ ಉತ್ತಮ ರೀತಿಯಲ್ಲಿ ದಾಖಲಾಗಲು ಕಾರ್ಯ ಪ್ರವೃತ್ತರಾಗುತ್ತೇವೆ ಎಂದು ಆಶ್ವಾಸನೆ ನೀಡಿದರು. ಎಂ.ಕೆ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ವಿಜ್ಞಾನ ಸಂಘದ ಅಧ್ಯಕ್ಷ ಮಹಾಂತೇಶ ಹುಲಗಬಾಳಿ, ರಾಜ್ಯ ಸಂಪನ್ಮೂಲ ವ್ಯಕ್ತಿ ಮಹೇಶ ಅಂಗಡಿ, ಶಾಲೆ ಮುಖ್ಯ ಶಿಕ್ಷಕ ಜಿ.ಪಿ. ಮಿಸಾಳೆ, ಸಂಸ್ಥೆ ನಿರ್ದೇಶಕ ಪಿ.ಪಿ. ಬೆಳಗಾವಕರ, ಕಾರ್ಯಕ್ರಮದ ನೋಡಲ್ ಅಧಿಕಾರಿ ವಿ.ಎನ್. ವನ್ನೂರ, ಸಲೀಂ ಕಿತ್ತೂರ, ಕೋರಿಶೆಟ್ಟಿ, ಬಡಿಗೇರ ಇದ್ದರು. ವಿಜ್ಞಾನ ಫೋರಂನಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪಾಸಿಂಗ್ ಪ್ಯಾಕೇಜ್ ಹಾಗೂ ಸ್ಕೋರಿಂಗ್ ಪ್ಯಾಕೇಜ್ ತಯಾರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts