More

    ಫುಡ್​ಪಾರ್ಕ್ ಸ್ಥಾಪನೆಗೆ ಕ್ರಮ

    ಹಾವೇರಿ: ಪ್ರಧಾನಿ ನರೇಂದ್ರ ಮೋದಿ ಅವರು 2ನೇ ಅವಧಿಗೆ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ್ದಾರೆ. ಈ 1 ವರ್ಷದಲ್ಲಿ ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ವಿವಿಧ ಯೋಜನೆಗಳಡಿ 3.5 ಸಾವಿರ ಕೋಟಿ ರೂ.ಗೂ ಅಧಿಕ ಅನುದಾನ ಮಂಜೂರಾಗಿದೆ ಎಂದು ಸಂಸದ ಶಿವಕುಮಾರ ಉದಾಸಿ ತಿಳಿಸಿದರು.

    ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಫುಡ್​ಪಾರ್ಕ್ ಸ್ಥಾಪನೆಗೆ ಕ್ರಮ ವಹಿಸಲಾಗುವುದು. ಇದರಿಂದ ಇಲ್ಲಿನ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗಲಿದೆ ಎಂದರು.

    ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರ, ಶಿಕಾರಿಪುರ, ಶಿವಮೊಗ್ಗ ಸಂರ್ಪಸುವ 92ಕಿಮೀ ಉದ್ದದ ನೂತನ ರೈಲು ಮಾರ್ಗ ಯೋಜನೆಗೆ ಕ್ಕೆ 1,700 ಕೋಟಿ ರೂ. ಮಂಜೂರಾತಿ ದೊರೆತಿದೆ. ಹಾವೇರಿಯಲ್ಲಿ ಮೆಡಿಕಲ್ ಕಾಲೇಜ್ ಆರಂಭಕ್ಕೆ 46ಕೋಟಿ ರೂ. ಬಿಡುಗಡೆಯಾಗಿದೆ. ಗ್ರಾಮ ಸಡಕ್ ಯೋಜನೆಯಡಿ ಜಿಲ್ಲೆಯ 245ಕಿಮೀ ರಸ್ತೆ ಅಭಿವೃದ್ಧಿಗೆ 159.25ಕೋಟಿ ರೂ., ಗದಗ ಜಿಲ್ಲೆಯ 160ಕಿಮೀ ರಸ್ತೆ ಅಭಿವೃದ್ಧಿಗೆ 109.85ಕೋಟಿ ರೂ. ಬಿಡುಗಡೆಯಾಗಿದೆ ಎಂದರು.

    ಸ್ವಚ್ಛ ಭಾರತ ಮಿಷನ್​ನಡಿ ಜಿಲ್ಲೆಗೆ 3.50ಕೋಟಿ ರೂ., ಗದಗ ಜಿಲ್ಲೆಗೆ 8.28ಕೋಟಿ ರೂ. ಅನುದಾನ ಲಭಿಸಿದೆ. 15ನೇ ಹಣಕಾಸು ಯೋಜನೆಯಡಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ 20.88ಕೋಟಿ ರೂ. ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 103.75ಕೋಟಿ ರೂ. ಮಂಜೂರಾಗಿದೆ. ಆಯುಷ್ಮಾನ್ ಭಾರತ ಯೋಜನೆಯಡಿ ಜಿಲ್ಲೆಯ 26,011ಜನ ವೈದ್ಯಕೀಯ ಚಿಕಿತ್ಸೆ ಪಡೆದಿದ್ದು, 37.08ಕೋಟಿ ರೂ. ನೆರವು ನೀಡಲಾಗಿದೆ ಎಂದರು.

    ಕರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ನರೇಗಾದಲ್ಲಿ ಜಿಲ್ಲೆಯಲ್ಲಿ 20.32ಕೋಟಿ ರೂ. ಖರ್ಚು ಮಾಡಲಾಗಿದೆ. 7.25ಲಕ್ಷ ಮಾನವ ದಿನಗಳನ್ನು ಸೃಜಿಸಿ ಜನರಿಗೆ ಉದ್ಯೋಗ ನೀಡಲಾಗಿದೆ. 100ದಿನಗಳಿಂದ 150ದಿನಗಳ ಮಾನವ ದಿನಗಳನ್ನು ನೀಡಲು ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದರು.

    ಕಿಸಾನ್ ಸಮ್ಮಾನ್ ಯೋಜನೆಯಡಿ ಜಿಲ್ಲೆಯ 1,81,431 ರೈತರಿಗೆ ತಲಾ 2ಸಾವಿರದಂತೆ 60ಕೋಟಿ ರೂ.ಗಳು ರೈತರ ಖಾತೆಗೆ ಜಮೆಯಾಗಿದೆ. ಜನಧನ ಖಾತೆಗೆ ಜಿಲ್ಲೆಯಲ್ಲಿ ತಲಾ 500ರೂ.ಗಳಂತೆ 2 ತಿಂಗಳ ಪ್ರೋತ್ಸಾಹಧನವನ್ನು ಜಮೆ ಮಾಡಲಾಗಿದೆ. ಉಜ್ವಲ ಯೋಜನೆಯಡಿ ಜಿಲ್ಲೆಯ 80 ಸಾವಿರ ಜನರಿಗೆ ಉಚಿತ ಸಿಲಿಂಡರ್ ಪೂರೈಸಲಾಗಿದೆ. ಗರೀಬ್ ಕಲ್ಯಾಣ ಯೋಜನೆಯಡಿ ಜಿಲ್ಲೆಯ 3,68,607 ಕುಟುಂಬಗಳಿಗೆ 2ತಿಂಗಳ ಉಚಿತ ಪಡಿತರ ವಿತರಿಸಲಾಗಿದೆ ಎಂದರು.

    ಶಾಸಕ ನೆಹರು ಓಲೇಕಾರ, ಮಾಜಿ ಶಾಸಕ ಶಿವರಾಜ ಸಜ್ಜನರ, ಜಿಪಂ ಸದಸ್ಯ ಸಿದ್ದರಾಜ ಕಲಕೋಟಿ, ಪ್ರಭು ಹಿಟ್ನಳ್ಳಿ, ಕಿರಣ ಕೋಣನವರ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

    ಕೇಂದ್ರ ಸರ್ಕಾರ ಘೊಷಿಸಿರುವ 20 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್​ನಲ್ಲಿ ಹಾವೇರಿ ಮತ್ತು ಗದಗ ಜಿಲ್ಲೆಗೆ ಹೆಚ್ಚಿನ ಅನುದಾನ ಪಡೆಯುವ ನಿಟ್ಟಿನಲ್ಲಿ ವಲಯವಾರು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗರಿಷ್ಠ ಪ್ರಮಾಣದಲ್ಲಿ ಉಭಯ ಜಿಲ್ಲೆಯ ಫಲಾನುಭವಿಗಳಿಗೆ ನೆರವು ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
    | ಶಿವಕುಮಾರ ಉದಾಸಿ, ಸಂಸದ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts