More

    ಫೆ.೧ ರಂದು ಹಡಪದ ಜನಜಾಗೃತಿ ಸಮಾವೇಶ

    ಬಾಗಲಕೋಟೆ: ಹಡಪದ ಅಪ್ಪಣ್ಣ ಸಮುದಾಯ ಭವನ ಉದ್ಘಾಟನೆ ಹಾಗೂ ನೂತನ ಕಟ್ಟಡಗಳ ಅಡಿಗಲ್ಲು ಸಮಾರಂಭ ಮತ್ತು ಹಡಪದ ಸಮಾಜದ ರಾಜ್ಯಮಟ್ಟದ ಜನಜಾಗೃತಿ ಸಮಾವೇಶ ಫೆ.೧ ರಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಸುಕ್ಷೇತ್ರ ತಂಗಡಗಿಯಲ್ಲಿ ಜರುಗಲಿದೆ ಎಂದು ಹಡಪದ ಸಮಾಜದ ರಾಜ್ಯ ಕಾರ್ಯಾಧ್ಯಕ್ಷ ಎಚ್.ಡಿ.ವೈದ್ಯ ಹೇಳಿದರು.
    ಹಡಪದ ಅಪ್ಪಣ್ಣ ಸಮುದಾಯ ಭವನಕ್ಕೆ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ಧರಾಮಯ್ಯನವರು ಒಂದುವರೆ ಕೋಟಿ ನೀಡಿದ್ದರು. ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಮಾಜದ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕಟ್ಟಡ ನಿರ್ಮಾಣಕ್ಕೆ ೩ ಕೋಟಿಯನ್ನು ನೀಡಿದ್ದಾರೆ. ಸಮಾವೇಶಕ್ಕೆ ಒಂದೂವರೆ ಲಕ್ಷ ಜನ ಸೇರಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ನೂತನ ಸಮುದಾಯಭವನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಉಪಸ್ಥಿತರಿರುವರು. ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ವಹಿಸುವರು. ಮುಖ್ಯ ಅತಿಥಿಗಳಾಗಿ ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಸಿ.ಸಿ.ಪಾಟೀಲ, ಕೊಟಾಶ್ರೀನಿವಾಸ ಪೂಜಾರಿ ಆಗಮಿಸಲಿದ್ದಾರೆ. ತಂಗಡಗಿಯ ಹಡಪದ ಅಪ್ಪಣ್ಣ ದೇವರ ಮಹಾಸಂಸ್ಥಾನಮಠದ ಅನ್ನದಾನ ಭಾರತಿ ಅಪ್ಪಣ್ಣ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.
    ಮುಖಂಡರಾದ ಮಲ್ಲಣ್ಣ ಹಡಪದ, ವಿಠಲ ಹಡಪದ, ಸುರೇಶ ಹಡಪದ, ವಿ.ಡಿ.ನಾವಿ, ಮಲ್ಲಿಕಾರ್ಜುನ ಹಡಪದ ಸುದ್ದಿಗೋಷ್ಠಿಯಲ್ಲಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts