More

    ಫೆ.10ರಂದು ಜಂತುಹುಳು ನಿವಾರಣೆ ಮಾತ್ರೆ ವಿತರಣೆ

    ಚಿಕ್ಕಬಳ್ಳಾಪುರ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾದ್ಯಂತ ಫೆ.10 ರಂದು ಶಾಲಾ ಮತ್ತು ಅಂಗನವಾಡಿ ಕೇಂದ್ರದ ಮಕ್ಕಳಿಗೆ ಜಂತುಹುಳು ನಿವಾರಣೆ ಮಾತ್ರೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ.
    ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಮೊದಲ ಹಂತದಲ್ಲಿ ಫೆ.10 ರಂದು ಅಂಗನವಾಡಿ ಕೇಂದ್ರ, ಶಾಲೆಗಳಲ್ಲಿನ 3,33,936 ಮಕ್ಕಳಿಗೆ ಮಾತ್ರೆ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ, ಎರಡನೇ ಹಂತದಲ್ಲಿ ಫೆ.17ರಂದು ಮನೆ ಮನೆಗೆ ತೆರಳಿ ವಿತರಿಸಲಾಗುತ್ತದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ ಬಿ.ಎಂ.ಯೋಗೇಶ್ ಗೌಡ ತಿಳಿಸಿದರು.
    ಬ್ಯಾಕ್ಟೀರಿಯಾ ಮೂಲಕ ಮಕ್ಕಳ ದೇಹ ಸೇರುವ ಜಂತುಹುಳು, ರಕ್ತಹೀನತೆ, ಅಪೌಷ್ಟಿಕತೆ, ದೈಹಿಕ ಬೆಳವಣಿಗೆ ಕುಂಠಿತ ಸೇರಿ ನಾನಾ ಸಮಸ್ಯೆಗಳಿಗೆ ಕಾರಣವಾಗಿದೆ ಎಂದರು.
    ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಸೇರಿ ವಿವಿಧ ಇಲಾಖೆಗಳು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸುವ ಮೂಲಕ ಜಂತುಹುಳು ಸಮಸ್ಯೆ ದೂರವಾಗಿಸಬೇಕು ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ ಚನ್ನಕೇಶವ ರೆಡ್ಡಿ ಮನವಿ ಮಾಡಿದರು.
    ಈಗಾಗಲೇ ಪ್ರತಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕ್ರಮದ ಮಾಹಿತಿ ನೀಡಿ, ಪ್ರಚಾರ ಕೈಗೊಳ್ಳಲು ಸೂಚಿಸಲಾಗಿದೆ. ಕರಪತ್ರಗಳ ಹಂಚಿಕೆ, ಭಿತ್ತಿಪತ್ರ ಅಂಟಿಸಿ ಜಾಗೃತಿ ಮೂಡಿಸಲಾಗಿದೆ ಎಂದು ವಿವರಿಸಿದರು.
    ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹರೀಶ್, ಉಪ ಶಿಕ್ಷಣಾಧಿಕಾರಿ ಸುಧಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts