More

    ಫ್ರೂಟ್ಸ್ ತಂತ್ರಾಂಶದಲ್ಲಿ ಮಾಹಿತಿ ದಾಖಲಿಸಿ

    ಯಾದಗಿರಿ: ಯಾದಗಿರಿ ಬರಪೀಡಿತ ಜಿಲ್ಲೆ ಎಂದು ಸಕರ್ಾರ ಘೋಷಿಸಿದ್ದು, ಬೆಳೆ ಸಮೀಕ್ಷೆ ಕುರಿತ ಎಲ್ಲ ರೈತರ ಸಂಪೂರ್ಣ ಮಾಹಿತಿಯನ್ನು ಮುಂದಿನ 10 ದಿನಗಳಲ್ಲಿ ಮುಗಿಸಿ ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಿ, ರೈತರಿಗೆ ನ್ಯಾಯಯುತ ಪರಿಹಾರ ತಲುಪಿಸಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ರಾಜ್ಯ ಈ ವರ್ಷ ಇತಿಹಾಸ ಕಾಣದ ಬರಕ್ಕೆ ತುತ್ತಾಗಿದೆ. ಮಳೆ ಇಲ್ಲದ ಕಾರಣ ರೈತರು ಪರಿತಪಿಸುವಂತಾಗಿದೆ. ಬೆಳೆ ಕೈ ಸೇರದೆ ಸಂಕಷ್ಟಕ್ಕೀಡಾಗಿದ್ದಾರೆ. ಇಂಥ ಸಂದರ್ಭದಲ್ಲಿ ನಾವು ರೈತರ ಪರ ನಿಲ್ಲಬೇಕಾಗಿದೆ ಎಂದು ಕಿವಿಮಾತು. ಅಧಿಕಾರಿಗಳು ಯಾದಗಿರಿಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ನಡೆಸಿದ್ದೀರಿ. 2015-16ರ ಸಮೀಕ್ಷೆಯ ಪ್ರಕಾರ ಜಿಲ್ಲೆಯಲ್ಲಿ 2.30 ಲಕ್ಷ ರೈತರಿದ್ದಾರೆ. ಆದರೆ, 1.80 ಲಕ್ಷ ರೈತರ ಮಾಹಿತಿ ಮಾತ್ರ ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಲಾಗಿದೆ. ಉಳಿದ 80 ಸಾವಿರ ರೈತರ ಬೆಳೆ ಮಾಹಿತಿ ಏಕೆ ಮಾಡಿಲ್ಲ? ಎಂದು ಸಚಿವರು ಕಿಡಿಕಾರಿದರು.

    ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಈಗಾಗಲೇ ಶೇ.95 ರಷ್ಟು ರೈತರ ಮಾಹಿತಿಯನ್ನು ತಂತ್ರಾಂಶದಲ್ಲಿ ನಮೂದಿಸಲಾಗಿದೆ. ಆದರೆ, ಯಾದಗಿರಿಯಲ್ಲಿ ಮಾತ್ರ ಶೇ.77 ರಷ್ಟು ಮಾತ್ರ ನಮೂದಿಸಲಾಗಿದೆ. 80 ಸಾವಿರ ರೈತರ ಮಾಹಿತಿ ಇನ್ನೂ ಅಪ್ಡೇಟ್ ಆಗಿಲ್ಲ. ನೀವು ಮಾಡುವ ತಪ್ಪಿಗೆ ಸರಕಾರ ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಬೇಕಾ? ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಮುಂದಿನ 10 ದಿನದಲ್ಲಿ ಶೇ.100 ರಷ್ಟು ರೈತರ ವಿವರಗಳನ್ನು ಫ್ರೂಟ್ಸ್ನಲ್ಲಿ ನಮೂದಿಸಬೇಕು ಎಂದು ಗಡುವು ನೀಡಿದರು.

    ನಮ್ಮ ಸಕರ್ಾರ ಅಧಿಕಾರಕ್ಕೆ ಬಂದ ನಂತರ ತಕರಾರು ಪ್ರಕರಣಗಳ ಇತ್ಯರ್ಥ ವೇಗ ಪಡೆದುಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಈ ಹಿಂದಿನ ಸಕರ್ಾರದಲ್ಲಿ ಉಪ ವಿಭಾಗೀಯ ಅಧಿಕಾರಿಗಳ ನ್ಯಾಯಾಲಯದಲ್ಲಿ 5 ವರ್ಷಕ್ಕೆ ಮೇಲ್ಪಟ್ಟ 32,710 ಪ್ರಕರಣಗಳು ಇದ್ದವು. ಆದರೆ, ಕಳೆದ ಮೂರೇ ತಿಂಗಳಲ್ಲಿ 20,519 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ತಹಸೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳ ಕೋಟರ್್ನಲ್ಲಿರುವ ಪ್ರಕರಣಗಳೂ ಸಹ ತ್ವರಿತ ಗತಿಯಲ್ಲಿ ಇತ್ಯರ್ಥವಾಗುತ್ತಿದೆ ಎಂದರು.

    ಜಿಲ್ಲಾ ಸರಹದ್ದಿನಲ್ಲಿ ಎಷ್ಟು ಸಕರ್ಾರಿ ಜಮೀನಿದೆ, ಪರಿಶಿಷ್ಟ ಜಾತಿ, ಪಂಗಡದ ಭೂಮಿ ಎಷ್ಟಿದೆ, ಈ ಪೈಕಿ ಎಷ್ಟು ಒತ್ತುವರಿಯಾಗಿದೆ ಎಂಬ ಕುರಿತು ಅಧಿಕಾರಿಗಳು ಸಂಪೂರ್ಣ ಮಾಹಿತಿ ಕಲೆಹಾಕಬೇಕು. ಈ ಭೂಮಿಯನ್ನು ರಕ್ಷಿಸುವ ಕೆಲಸ ಆಗಬೇಕು. ಸಕರ್ಾರಿ ಭೂಮಿಯನ್ನು ಗುರುತಿಸಿದ ನಂತರ ಮೂರು ತಿಂಗಳಿಗೊಮ್ಮೆ ಬೀಟ್ ವ್ಯವಸ್ಥೆ ಮೂಲಕ ಒತ್ತುವರಿಯಾಗಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು. ಈ ಮಾಹಿತಿಯನ್ನು ನಮೂದಿಸಲು ಬೀಟ್ ಆ್ಯಪ್ ಅಭಿವೃದ್ಧಿಪಡಿಸುತ್ತಿದ್ದು, ಶೀಘ್ರದಲ್ಲಿ ಅಧಿಕಾರಿಗಳ ಬಳಕೆಗೆ ಮುಕ್ತವಾಗಲಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts