More

    ಬಂಡೀಪುರ ಅರಣ್ಯದೊಳಗೆ ಸ್ವಾಗತ ಕೋರಿದ ಸಿದ್ದರಾಮಯ್ಯ

    ಚಾ.ನಗರ : ಕೇರಳದಿಂದ ಗುಂಡ್ಲುಪೇಟೆಗೆ ಆಗಮಿಸುವಾಗ ಬಂಡೀಪುರದ ಅರಣ್ಯ ಪ್ರದೇಶದ ರಸ್ತೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಕಾರುಗಳಿಂದ ಕೆಳಗಿಳಿದಿರುವ ವಿಡಿಯೊ ವೈರಲ್ ಆಗಿದ್ದು ಪರಿಸರವಾದಿಗಳು ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.


    ಭಾರತ್ ಜೋಡೋ ಯಾತ್ರೆಗೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲು ಡಿ.ಕೆ.ಶಿವಕುಮಾರ್ ಬಣದವರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಎದುರು ವೇದಿಕೆಯ ಬಳಿ ಕಾದಿದ್ದರು. ಆದರೆ ಕೆಕ್ಕನಹಳ್ಳ ಮಾರ್ಗವಾಗಿ ಬಂಡೀಪುರಕ್ಕೆ ಆಗಮಿಸುತ್ತಿದ್ದ ರಾಹುಲ್ ಅವರನ್ನು ಸ್ವಾಗತಿಸಲು ನಲವತ್ತಕ್ಕೂ ಹೆಚ್ಚಿನ ಕಾರುಗಳಲ್ಲಿ ಅರಣ್ಯದೊಳಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖಂಡರು ಸುಮಾರು ಒಂದು ಗಂಟೆ ಕಾಲ ಆ ಪ್ರದೇಶದಲ್ಲಿ ಕಾದು ನಿಂತಿದ್ದರು. ಅಲ್ಲದೆ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಸೇರಿದಂತೆ ಹಲವರು ವಾಹನಗಳಿಂದ ಕೆಳಗಿಳಿದಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ.


    ವನ್ಯಜೀವಿಗಳ ಹಿತದೃಷ್ಟಿಯಿಂದ ಅರಣ್ಯ ಇಲಾಖೆಯು ಈ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ನಿಷೇಧಿಸಿದೆ. ಅಲ್ಲದೆ ಅರಣ್ಯದೊಳಗೆ ಇಳಿಯುವುದು ಕೂಡ ಅಪರಾಧವಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ಸಂದರ್ಭದಲ್ಲಿ ಅನಧಿಕೃತ ಪಾರ್ಕಿಂಗ್ ಮಾಡಿದ ವಾಹನಗಳಿಗೆ ದಂಡ ವಿಧಿಸುತ್ತಾರೆ. ಆದರೆ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ನಿಯಮ ಉಲ್ಲಂಘಿಸಿದ್ದಾರೆ. ಈ ಸಂದರ್ಭದಲ್ಲಿ ವನ್ಯಜೀವಿಗಳು ದಾಳಿ ನಡೆಸಿದ್ದರೆ ಯಾರು ಹೊಣೆ ? ಇವರ ವಿರುದ್ಧ ಅರಣ್ಯ ಇಲಾಖೆ ಯಾಕೆ ಕ್ರಮಕೈಗೊಂಡಿಲ್ಲ ಎಂದು ಪರಿಸರಪ್ರೇಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
    ಈ ಬಗ್ಗೆ ಬಂಡೀಪುರ ಹುಲಿ ಯೋಜನೆಯ ನಿರ್ದೇಶಕ ಡಾ.ರಮೇಶ್ ಕುಮಾರ್ ಮಾತನಾಡಿ, ರಾಹುಲ್ ಗಾಂಧಿಯವರು ಕೇರಳದಿಂದ ಮೂಲೆಹೊಳೆ ಮಾರ್ಗವಾಗಿ ಬರುತ್ತಾರೆ ಎಂಬ ಮಾಹಿತಿ ಇತ್ತು. ಆದರೆ ಕೆಕ್ಕನಹಳ್ಳ ಮಾರ್ಗವಾಗಿ ಬಂದಿದ್ದಾರೆ. ಅರಣ್ಯ ಪ್ರದೇಶದಲ್ಲಿ ವಾಹನಗಳನ್ನು ನಿಲ್ಲಿಸಿರುವ ಬಗ್ಗೆ ವಿಚಾರಣೆ ನಡೆಸಲಾಗುವುದು ಎಂದು ಪ್ರತಿಕ್ರಿಯಿಸಿದ್ದಾರೆ.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts