More

    ಬಂದ್​ಗೆ ಜನರಿಂದ ಮಿಶ್ರ ಪ್ರತಿಕ್ರಿಯೆ

    ನವಲಗುಂದ: ಭೂ ಸುಧಾರಣೆ, ಎಪಿಎಂಸಿ, ವಿದ್ಯುತ್, ಕಾರ್ವಿುಕ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಹಿಂಪಡೆಯಬೇಕು. ರೈತ, ಜನ ವಿರೋಧಿ ನೀತಿ ಅನುಸರಿಸುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿ ರೈತಪರ ಸಂಘಟನೆಗಳು ನೀಡಿದ್ದ ಬಂದ್ ಕರೆಗೆ ಸೋಮವಾರ ವ್ಯಾಪಕ ಬೆಂಬಲ ವ್ಯಕ್ತವಾಯಿತು.

    ರೈತ ಮತ್ತು ವಿವಿಧ ಸಂಘಟನೆ, ಜೆಡಿಎಸ್, ಕಾಂಗ್ರೆಸ್ ಪದಾಧಿಕಾರಿಗಳು ಪಟ್ಟಣದ ಅಣ್ಣಿಗೇರಿ ಸರ್ಕಲ್, ಹುಬ್ಬಳ್ಳಿ, ವಿಜಯಪುರ ರಾಷ್ಟ್ರೀಯ ಹೆದ್ದಾರಿ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.

    ಮಾಜಿ ಶಾಸಕ ಎನ್.ಎನ್. ಕೋನರಡ್ಡಿ ಮಾತನಾಡಿ, ಕರೊನಾ ಸಂದರ್ಭದಲ್ಲಿ ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿರುವ ರೈತ ಮತ್ತು ಜನ ವಿರೋಧಿ ಕಾಯ್ದೆ, ನೀತಿಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಲೇ ರದ್ದುಗೊಳಿಸಬೇಕು. ಲೋಕಸಭೆ ಮತ್ತು ಆಯಾ ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಸಮಗ್ರವಾಗಿ ರ್ಚಚಿಸಿದ ನಂತರ ಕಾಯ್ದೆಗಳ ತಿದ್ದುಪಡಿಗೆ ತೀರ್ಮಾನ ತೆಗದುಕೊಳ್ಳಬಹುದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರ್ಚಚಿಸದೆ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.

    ರೈತ ಹೋರಾಟ ಒಕ್ಕೂಟದ ಕೇಂದ್ರ ಸಮಿತಿ ಮುಖಂಡ ಲೋಕನಾಥ ಹೆಬಸೂರ ಮಾತನಾಡಿ, ರೈತ ಮತ್ತು ಜನಪರ ಕಾಳಜಿ ವಹಿಸದೇ, ಅಧಿಕಾರ ದರ್ಪ ತೋರಿಸಿ ದುರಾಡಳಿತ ನಡೆಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೀತಿ ಖಂಡಿಸುತ್ತೇವೆ. ಅಧಿಕಾರ ಶಾಶ್ವತವಲ್ಲ. ಅಧಿಕಾರದಲ್ಲಿದ್ದಾಗ ಮಾಡಿದ ಒಳ್ಳೆಯ ಕೆಲಸಗಳು ಜನರಲ್ಲಿ ಶಾಶ್ವತವಾಗಿ ಉಳಿಯುತ್ತವೆ ಎಂದರು.

    ಪಕ್ಷಾತೀತ ಹೋರಾಟ ಸಮಿತಿ ಅಧ್ಯಕ್ಷ ಸಿದ್ದಪ್ಪ ಮುಪೈನವರ ನೇತೃತ್ವದಲ್ಲಿ ರೈತ ಹೋರಾಟಗಾರರು ಕಾಯ್ದೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ರೈತರ ಬೆಳೆಗಳಿಗೆ ಯೋಗ್ಯವಾದ ಬೆಂಬಲ ಬೆಲೆ ನೀಡಬೆಕು. ರೈತ ಹಿತಕ್ಕಗನುಗುಣವಾಗಿ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿದರು.

    ಶ್ರೀಶೈಲ ಮೂಲಿಮನಿ, ವೀರಣ್ಣ ನೀರಲಗಿ, ಶರಣು ಯಮನೂರು, ಡಿ.ಕೆ. ಹಳ್ಳದ, ಶಾಂತವ್ವ ಚಿಕ್ಕನರಗುಂದ, ಕಾಂಗ್ರೆಸ್ಸಿನ ವಿಜಯಲಕ್ಷ್ಮೀ ಕೆಂಪೇಗೌಡ ಪಾಟೀಲ, ಆರ್.ಎಚ್. ಕೋನರಡ್ಡಿ, ವರ್ಧಮಾನ ಹಿರೇಗೌಡ್ರ, ಸದುಗೌಡ ಪಾಟೀಲ, ಕುಮಾರ ಬ್ಯಾಹಟ್ಟಿ, ರೈತ ಮುಖಂಡ ಸುಭಾಸಚಂದ್ರಗೌಡ ಪಾಟೀಲ, ಮಲ್ಲೇಶ ಉಪ್ಪಾರ ಇದ್ದರು.

    ಪಟ್ಟಣದ ಗಾಂಧಿ ಮಾರ್ಕೆಟ್, ಬಸ್ ನಿಲ್ದಾಣ, ಮೊದಲಾದೆಡೆ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಬಂದ್ ಮಾಡಿ ವ್ಯಾಪಾರಸ್ಥರು ಬಂದ್​ಗೆ ಸಹಕಾರ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts