More

    ಬಂದ್ ವೇಳೆ ಕಾನೂನು ಮೀರಿದರೆ ಕಠಿಣಕ್ರಮ- ಎಸ್ಪಿ ಉಮಾ ಪ್ರಶಾಂತ್ ಎಚ್ಚರಿಕೆ

    ದಾವಣಗೆರೆ: ಭಾರತೀಯ ರೈತ ಒಕ್ಕೂಟ ಕರೆ ಕೊಟ್ಟಿರುವ ಸೋಮವಾರದ ದಾವಣಗೆರೆ ಬಂದ್ ವೇಳೆಯಲ್ಲಿ ಕಾನೂನು, ಸುವ್ಯವಸ್ಥೆಗೆ ತೊಂದರೆ ಅಗದಂತೆ ಹೋರಾಟ ನಡೆಸುವಂತೆ ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆ ಪ್ರತಿಭಟನಾಕಾರರಿಗೆ ಸೂಚನೆ ನೀಡಿದೆ.
    ಬಂದ್ ವೇಳೆ ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘನೆ ಮಾಡುವಂತಿಲ್ಲ. ಬಲವಂತವಾಗಿ ಯಾವುದೇ ಶಾಲಾ-ಕಾಲೇಜು, ಸರ್ಕಾರಿ, ಖಾಸಗಿ ಸಂಸ್ಥೆಗಳನ್ನು ಮತ್ತು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವಂತಿಲ್ಲ. ಒಂದು ವೇಳೆ ಪ್ರಯತ್ನಿಸಿದ್ದಲ್ಲಿ ಕಾನೂನು ರೀತ್ಯ ಕ್ರಮವಹಿಸಲಾಗುವುದು ಎಂದು ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಎಚ್ಚರಿಕೆ ನೀಡಿದ್ದಾರೆ.
    ಸಾರ್ವಜನಿಕರ ಜನಜೀವನ, ವಾಹನ ಮತ್ತು ಆಸ್ತಿ-ಪಾಸ್ತಿ ನಾಶ ಮಾಡುವಂತಿಲ್ಲ. ರಸ್ತೆ ತಡೆಗೆ ಹಾಗೂ ವಾಹನ ಅಡ್ಡಗಟ್ಟುವುದಕ್ಕೆ ಅವಕಾಶ ಇಲ್ಲ ಮತ್ತು ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುವಂತಿಲ್ಲ. ಒಂದು ವೇಳೆ ಪ್ರಯತ್ನಿಸಿದ್ದಲ್ಲಿ ಕಾನೂನು ರೀತ್ಯ ಕ್ರಮವಹಿಸಲಾಗುವುದು.
    .ಯಾವುದೇ ಕಾರಣಕ್ಕೂ ತುರ್ತು ಸೇವೆಗಳಿಗೆ ಮತ್ತು ಅಗತ್ಯ ವಸ್ತುಗಳ ಸಾಗಾಣಿಕೆ ಅಡ್ಡಿಪಡಿಸುವಂತಿಲ್ಲ. ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ಟಯರ್‌ಗಳನ್ನು ಹಾಕಿ ಹಚ್ಚಲು ಮತ್ತು ಯಾವುದೇ ಪ್ರತಿಕೃತಿಗಳನ್ನು ದಹನ ಮಾಡಲು ಅವಕಾಶವಿರುವುದಿಲ್ಲ.
    ಬಂದ್ ಹೆಸರಿನಲ್ಲಿ ಯಾರೇ ಆಗಲಿ ಕಾನೂನು ಕೈಗೆ ತೆಗೆದುಕೊಂಡರೆ ಅವರ ವಿರುದ್ಧ ಪೊಲೀಸ್ ಇಲಾಖೆ ಕಾನೂನು ಕ್ರಮ ಜರುಗಿಸಲಾಗುವುದು. ಸುಳ್ಳು ವದಂತಿ ಹಬ್ಬಿಸುವವರ ವಿರುದ್ಧ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸಂದೇಶ ಅಥವಾ ಪೋಸ್ಟರ್‌ಗಳನ್ನು ಹಾಕುವವರ ಮೇಲೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು.
    ಮುನ್ನೆಚ್ಚರಿಕಾ ಕ್ರಮವಾಗಿ ದಾವಣಗೆರೆ ನಗರದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ, ಸಶಸ್ತ್ರ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಅವರು ಪತ್ತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts