More

    ಬಡವರ ಮನೆ ಬಾಗಿಲಿಗೆ ಪಡಿತರ

    ನರೇಗಲ್ಲ: ಏಪ್ರಿಲ್ ಮತ್ತು ಮೇ ಎರಡೂ ತಿಂಗಳ ಪಡಿತರವನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲು ರಾಜ್ಯ ಸರ್ಕಾರ ಆದೇಶಿಸಿದ್ದರಿಂದ ತಾಲೂಕಿನ ಎಲ್ಲ ಪಡಿತರ ಅಂಗಡಿಗಳಿಗೆ ಪಡಿತರ ವಿತರಿಸುವಂತೆ ಸೂಚಿಸಲಾಗಿದೆ ಎಂದು ತಹಸೀಲ್ದಾರ್ ಜೆ.ಜಿ. ಜಕ್ಕನಗೌಡ್ರ ಹೇಳಿದರು.

    ಮಲ್ಲಾಪೂರ ಗ್ರಾಮದಲ್ಲಿ ಫಲಾನುಭವಿಗಳ ಮನೆ ಬಾಗಿಲಿಗೆ ಪಡಿತರ ವಿತರಿಸಿ ಅವರು ಮಾತನಾಡಿದರು. ‘ಪಡಿತರ ವಿತರಣಾ ಕೇಂದ್ರದ ಹತ್ತಿರದಲ್ಲಿಯೇ ಮನೆ ಇರುವವರು ನ್ಯಾಯಬೆಲೆ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಪಡಿತರ ಪಡೆಯಬೇಕು. ಯಾವುದೇ ಕಾರಣಕ್ಕೂ ಪಡಿತರ ವಿತರಣೆಯನ್ನು ಸ್ಥಗಿತಗೊಳಿಸುವುದಿಲ್ಲ. ಪ್ರತಿಯೊಬ್ಬ ಫಲಾನುಭವಿ ಗಳಿಗೂ ಪಡಿತರ ವಿತರಣೆ ಮಾಡಲಾಗುತ್ತದೆ. ಸಾರ್ವ ಜನಿಕರು ಸಹಕಾರ ನೀಡಬೇಕು’ ಎಂದರು. ಪ.ಪಂ. ಮುಖ್ಯಾಧಿಕಾರಿ ಎಂ.ಎ. ನೂರುಲ್ಲಾಖಾನ್ ಮಾತನಾಡಿದರು.

    ಸಾರ್ವಜನಿಕರ ಆಕ್ರೋಶ: ಕಡುಬಡವರಿಗೆ ವಿತರಿಸಬೇಕಿದ್ದ ಹಾಲನ್ನು ಉಳ್ಳವರಿಗೆ ನೀಡುವ ಮೂಲಕ ಬಡವರಿಗೆ ಅನ್ಯಾಯ ಮಾಡಲಾಗುತ್ತಿದೆ. ಆರ್ಥಿಕವಾಗಿ ಉತ್ತಮವಾಗಿರುವ ಒಂದೇ ಪಕ್ಷದ ಕಾರ್ಯಕರ್ತರ ಮನೆಗಳಿಗೆ ಹಾಲು ವಿತರಣೆ ಮಾಡುವ ಮೂಲಕ ರಾಜಕೀಯ ಮಾಡಲಾಗುತ್ತಿದೆ ಎಂದು ಕೋಡಿಕೊಪ್ಪದ ನಿವಾಸಿಗಳಾದ ವೀರಪ್ಪ ಜಿರ್ಲ, ನಜೀರ್ ಹದ್ಲಿ ಇತರರು ಅಧಿಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts