More

    ಬಡವರ ಸಂಕಷ್ಟಕ್ಕೆ ಸಪ್ತಪದಿ ಪರಿಹಾರ

    ಧಾರವಾಡ: ಬಡ, ಮಧ್ಯಮ ವರ್ಗದ ಕುಟುಂಬಗಳೂ ಮದುವೆಗೆ ಸಾಕಷ್ಟು ಹಣ ಖರ್ಚು ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿವೆ. ಅಂಥವರಿಗೆ ಸರ್ಕಾರದ ಇಲಾಖೆಯಿಂದಲೇ ಆಯೋಜಿಸುವ ‘ಸಪ್ತಪದಿ’ ಸರಳ ಸಾಮೂಹಿಕ ವಿವಾಹ ಯೋಜನೆ ಅನುಕೂಲವಾಗಲಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    ಜಿಲ್ಲಾಡಳಿತ, ಜಿ.ಪಂ. ಹಾಗೂ ಹಿಂದು ಧಾರ್ವಿುಕ ಸಂಸ್ಥೆಗಳು ಮತ್ತು ಧರ್ವದಾಯ ದತ್ತಿಗಳ ಇಲಾಖೆ ಸಹಯೋಗದೊಂದಿಗೆ ನಗರದ ಕಲಾಭವನದಲ್ಲಿ ಭಾನುವಾರ ಆಯೋಜಿಸಿದ್ದ ‘ಸಪ್ತಪದಿ’ ಸರಳ ಸಾಮೂಹಿಕ ವಿವಾಹ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

    ವಧುವಿಗೆ ಧಾರೆ ಸೀರೆಗೆಂದು 10,000 ರೂ. ಹಾಗೂ 8 ಗ್ರಾಂ ಚಿನ್ನದ ಮಾಂಗಲ್ಯ ಮತ್ತು ವರನಿಗೆ 5,000 ರೂ. ಸೇರಿ ಜೋಡಿಗೆ 55,000 ರೂ. ಖರ್ಚು ಮಾಡಲಾಗುತ್ತಿದೆ. ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ಸಂಬಂಧಿಸಿದ ದೇವಾಲಯದ ನಿಧಿಯಿಂದ ಮಾಡಲಾಗುವುದು. ಜಿಲ್ಲೆಯಲ್ಲಿ ಧಾರವಾಡದ ಸೋಮೇಶ್ವರ ದೇವಾಲಯ, ಹುಬ್ಬಳ್ಳಿಯ ಸಿದ್ಧಾರೂಢಮಠ, ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಮಾರುತಿ ದೇವಸ್ಥಾನ, ಅಣ್ಣಿಗೇರಿಯ ಅಮೃತೇಶ್ವರ ದೇವಸ್ಥಾನ ಹಾಗೂ ಕಲಘಟಗಿಯ ಗ್ರಾಮದೇವತೆ ದೇವಸ್ಥಾನದಲ್ಲಿ ಸಪ್ತಪದಿ ವಿವಾಹ ನಡೆಯದೆ. ಏ. 26 ಮತ್ತು ಮೇ 24ರಂದು ವಿವಾಹ ನಡೆಯಲಿವೆ. ಆಸಕ್ತರು ಆಯಾ ತಹಸೀಲ್ದಾರ್ ಕಚೇರಿಗಳಲ್ಲಿ ಮಾ. 27ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದರು.

    ಯೋಜನೆಯ ಕರಪತ್ರವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಿಡುಗಡೆ ಮಾಡಿದರು. ಸಪ್ತಪದಿ ಕುರಿತು ಆಕಾಶವಾಣಿಯ ಹಿರಿಯ ಉದ್ಘೋಷಕ ಡಾ. ಶಶಿಧರ ನರೇಂದ್ರ ಉಪನ್ಯಾಸ ನೀಡಿದರು. ಇದೇವೇಳೆ ಸಪ್ತಪದಿ ಸರಳ ಸಾಮೂಹಿಕ ವಿವಾಹದ ಜನಜಾಗೃತಿಗಾಗಿ ರೂಪಿಸಿದ ರಥಕ್ಕೆ ಚಾಲನೆ ನೀಡಲಾಯಿತು.

    ಜಿಲ್ಲಾಧಿಕಾರಿ ದೀಪಾ ಚೋಳನ್ ಸ್ವಾಗತಿಸಿದರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಸಿ.ಎಂ. ನಿಂಬಣ್ಣವರ, ಅಮೃತ ದೇಸಾಯಿ, ಜಿ.ಪಂ. ಸಿಇಒ ಡಾ. ಬಿ.ಸಿ. ಸತೀಶ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ತಾ.ಪಂ. ಅಧ್ಯಕ್ಷ ಈರಣ್ಣ ಏಣಗಿ, ಜಿ.ಪಂ. ಸದಸ್ಯರಾದ ಎನ್.ಎನ್. ಪಾಟೀಲ, ಕಲ್ಲಪ್ಪ ಪುಡಕಲಕಟ್ಟಿ, ಚನ್ನಬಸಪ್ಪ ಮಟ್ಟಿ, ಉಪ ವಿಭಾಗಾಧಿಕಾರಿ ಮಹಮ್ಮದ್ ಜುಬೇರ್, ತಹಸೀಲ್ದಾರ್ ಸಂತೋಷಕುಮಾರ ಬಿರಾದಾರ, ಮಾಜಿ ಶಾಸಕಿ ಸೀಮಾ ಮಸೂತಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಇತರರಿದ್ದರು.

    ವಿಶ್ವದ ಹಲವು ರಾಷ್ಟ್ರಗಳಲ್ಲಿ ಕುಟುಂಬ ಕಲ್ಪನೆ ವಿನಾಶದತ್ತ ಸಾಗಿದೆ. ಏಕಾಂಗಿ ಜೀವನ, ಕೌಟುಂಬಿಕ ಬಿಕ್ಕಟ್ಟು ಹೆಚ್ಚಾಗಿ ಮಾನಸಿಕ ಅಶಾಂತಿ, ಅಪರಾಧ ಕೃತ್ಯಗಳಿಗೆ ಕಾರಣವಾಗುತ್ತಿದೆ. ಭಾರತದಲ್ಲಿ ಕುಟುಂಬ ವ್ಯವಸ್ಥೆ ಇಂದಿಗೂ ಪವಿತ್ರವಾಗಿದೆ. ಬಡ, ಮಧ್ಯಮ ವರ್ಗದವರು, ಅಸಹಾಯಕರಿಗೆ ಯೋಜನೆಯಿಂದ ಅನುಕೂಲವಾಗಲಿದೆ. | ಪ್ರಲ್ಹಾದ ಜೋಶಿ ಕೇಂದ್ರ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts