More

    ಬಡ ಮಕ್ಕಳ ಆಶಾಕಿರಣ ಸಾಲೂರು ಮಠ

    ಹನೂರು: ಸಾಲೂರು ಮಠ ಹಾಗೂ ಶ್ರೀ ಮಲೆಮಹದೇಶ್ವರ ಸ್ವಾಮಿ ಕೃಪಾ ವಿದ್ಯಾಸಂಸ್ಥೆ ಅಭಿವೃದ್ಧಿಗೆ ಲಿಂಗೈಕ್ಯ ಶ್ರೀ ಪಟ್ಟದ ಮಹದೇವ ಸ್ವಾಮೀಜಿ ಅವರ ಕೊಡುಗೆ ಅಪಾರ ಎಂದು ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಬಣ್ಣಿಸಿದರು.


    ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಆವರಣದಲ್ಲಿ ಭಾನುವಾರ ಲಿಂಗೈಕ್ಯ ಶ್ರೀ ಪಟ್ಟದ ಮಹದೇವ ಸ್ವಾಮೀಜಿ ಅವರ 28ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಅಂಗವಾಗಿ ಭಾವಚಿತ್ರದ ಪಲ್ಲಕ್ಕಿ ಉತ್ಸವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ದೇಶದ ಧಾರ್ಮಿಕ ಇತಿಹಾಸವನ್ನು ಅವಲೋಕಿಸಿದಾಗ ಮಠಗಳು ಪ್ರಾಚೀನ ಕಾಲದಿಂದಲೂ ತನ್ನದೇ ಆದ ವೈಶಿಷ್ಟೃತೆ ಹೊಂದಿವೆ. ಕರ್ನಾಟಕದಲ್ಲಿ 12ನೇ ಶತಮಾನದ ವೇಳೆಗೆ ಶರಣರ ಕಾಯಕ ದಾಸೋಹ ಕಲ್ಪನೆಯಿಂದ ಮಠಗಳು ಪ್ರಜ್ಜಲಿಸಲು ಪ್ರಾರಂಭಿಸಿದವು. 20ನೇ ಶತಮಾನದಲ್ಲಿ ಕಾಯಕದ ಜತೆಗೆ ಶೈಕ್ಷಣಿಕ ಕ್ರಾಂತಿಗೂ ಅಡಿಗಲ್ಲು ಹಾಕಿದವು. ಈ ದಿಸೆಯಲ್ಲಿ ನಾಡಿನಲ್ಲಿ ಕಾಯಕ, ದಾಸೋಹ ಹಾಗೂ ಶೈಕ್ಷಣಿಕ ಪರಂಪರೆಯಲ್ಲಿ ಶೀ ಸಾಲೂರು ಮಠ ಸಹ ಒಂದು ಎಂದು ಬಣ್ಣಿಸಿದರು.


    ಸಾಲೂರು ಮಠದಲ್ಲಿ ಕಾಯಕ ಸೇವೆ ಮಾಡಿದ ಶ್ರೀ ಪಟ್ಟದ ಮಹದೇವ ಸ್ವಾಮೀಜಿ ಅವರು ಬಾಲ್ಯದಲ್ಲಿಯೇ ಶ್ರೀ ಮಹದೇಶ್ವರರ ಪ್ರಭಾವಕ್ಕೆ ಒಳಗಾಗಿ ಕನಕಪುರ ದೇಗುಲ ಮಠದಲ್ಲಿ ಶಿಕ್ಷಣ ಪಡೆದರು. ಆದರೆ ಹೆಚ್ಚಿನ ಶಿಕ್ಷಣ ಪಡೆಯಲು ಸಾಧ್ಯವಾಗಲಿಲ್ಲ. ಬಳಿಕ ಗುರು ಶ್ರೀ ಮುದ್ದುವೀರ ಸ್ವಾಮೀಜಿ ಅವರ ಅಪ್ಪಣೆಯಂತೆ ಮ.ಬೆಟ್ಟಕ್ಕೆ ಬಂದು ನೆಲೆಸಿ ಸ್ವಾಮಿಯ ಪೂಜಾ ಕಾರ್ಯದ ಜತೆಗೆ ಮಠದ ಅಭಿವೃದ್ಧಿಗೆ ಶ್ರಮಿಸಿದ್ದರು. ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದರು. ಗಿರಿಜನರು, ದೀನದಲಿತರು ಹಾಗೂ ದುರ್ಬಲ ವರ್ಗದ ಮಕ್ಕಳಿಗೆ ಶಿಕ್ಷಣ ಸಂಸ್ಥೆ ತೆರೆಯುವುದರ ಜತೆಗೆ ವಸತಿ ಸೌಕರ್ಯ ಕಲ್ಪಿಸಿದ್ದರು. ಹಳ್ಳಿಗಳಿಗೆ ತೆರಳಿ ಧಾನ್ಯ ಸಂಗ್ರಹಿಸಿ ಸಾಲೂರು ಮಠದ ಕಟ್ಟಡ ನಿರ್ಮಾಣ ಕಾರ್ಯ ನೆರವೇರಿಸಿದರು. ಇಂದು ಶ್ರೀ ಮಠವು ಬಡಮಕ್ಕಳ ಶಿಕ್ಷಣಕ್ಕೆ ಆಶಾಕಿರಣವಾಗಿದ್ದು, ಕೋಟ್ಯಂತರ ಭಕ್ತರನ್ನು ಹೊಂದಿದೆ. ಇವರ ಸೇವೆ ಅಪಾರ ಎಂದು ಬಣ್ಣಿಸಿದರು.


    ವಿಜೃಂಭಣೆಯ ಮೆರವಣಿಗೆ: ಸಂಸ್ಮರಣೆ ಅಂಗವಾಗಿ ಮಠದ ಶ್ರೀ ಮಹದೇವ ಸ್ವಾಮೀಜಿ ಅವರ ಗದ್ದುಗೆಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಲಾಗಿತ್ತು. ಬೆಳಗ್ಗೆ 4.30ರಲ್ಲಿ ಗದ್ದುಗೆಗೆ ಏಕವಾರು ರುದ್ರಾಭಿಷೇಕ, ಅಷ್ಟೋತ್ತರ ಸಹಿತ ಮಹಾ ಮಂಗಳಾರತಿ ನೆರವೇರಿಸಲಾಯಿತು. ಬಳಿಕ ವಿವಿಧ ಪುಷ್ಪಗಳಿಂದ ಸಿಂಗರಿಸಿದ ಪಲ್ಲಕ್ಕಿಯಲ್ಲಿ ಭಾವಚಿತ್ರವನ್ನಿರಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ವಾದ್ಯಮೇಳ ಹಾಗೂ ಕಲಾ ತಂಡದೊಂದಿಗೆ ಹೊರಟ ಮೆರವಣಿಗೆ, ದೇವಸ್ಥಾನ, ಅಂತರಗಂಗೆ ರಸ್ತೆ, ತಂಬಡಿಗೇರಿ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಸಾಗಿತು. ವೀರಗಾಸೆ ಕುಣಿತ, ಡೊಳ್ಳುಕುಣಿತ, ನಂದಿಧ್ವಜ ಕಂಬ ಕುಣಿತ ಹಾಗೂ ಕಂಸಾಳೆ ನೃತ್ಯ ಎಲ್ಲರ ಗಮನ ಸೆಳೆಯಿತು.


    ಕುಣಿದು ಕುಪ್ಪಳಿಸಿದ ಭಕ್ತರು: ಮೆರವಣಿಗೆಯಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದರು. ಈ ವೇಳೆ ಮಹಿಳೆಯರು ಹಾಗೂ ಹೆಣ್ಣು ಮಕ್ಕಳು ನವನವೀನ ಉಡುಗೆ ತೊಟ್ಟು ವಾದ್ಯ ಹಾಗೂ ತಮಟೆಯ ತಾಳಕ್ಕೆ ಕುಣಿದು ಕುಪ್ಪಳಿಸಿದರು. ಪಟಾಕಿ ಸಿಡಿಸಿ ಖುಷಿ ಪಟ್ಟರು. ಭಕ್ತರಿಗೆ ಮಠದ ವತಿಯಿಂದ ನಿರಂತರ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿತ್ತು.
    ಶಾಸಕ ನರೇಂದ್ರ ಭಾಗಿ: ಶಾಸಕ ಆರ್.ನರೇಂದ್ರ ಸಾಲೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆಯ ದರ್ಶನ ಪಡೆದರು. ಬಳಿಕ ಹಿರಿಯ ಶ್ರೀ ಗುರುಸ್ವಾಮೀಜಿ ಹಾಗೂ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ವರ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿದರು.


    ಕನಕಪುರ ದೇಗುಲ ಮಠದ ಶ್ರೀ ಚನ್ನಬಸವಸ್ವಾಮೀಜಿ, ಸಿದ್ದಮಲ್ಲಸ್ವಾಮೀಜಿ, ಶರತ್‌ಚಂದ್ರ ಸ್ವಾಮೀಜಿ, ಶ್ರೀಕಂಠ ಸ್ವಾಮೀಜಿ, ಮಾಜಿ ಶಾಸಕ ಎ.ಆರ್ ಕೃಷ್ಣಮೂರ್ತಿ ಇನ್ನಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts