More

    ಬಡ ವರ್ಗದವರಿಗೂ ಉನ್ನತ ಶಿಕ್ಷಣ ಕೊಡಿ


    ಯಾದಗಿರಿ: ಪ್ರಸ್ತುತ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರ ಉದ್ಯಮವಾಗಿ ಬದಲಾಗುತ್ತಿದ್ದು, ಖಾಸಗಿ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣದ ಜತೆಗೆ ಬಡ ವರ್ಗದವರಿಗೂ ಉನ್ನತ ಶಿಕ್ಷಣ ನೀಡಲು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಕರೆ ನೀಡಿದರು.

    ಶನಿವಾರ ಸಂಜೆ ನಗರದ ಹೊರವಲಯದಲ್ಲಿನ ಆರ್ಯಭಟ್ಟ ಅಂತರಾಷ್ಟ್ರೀಯ ಅಕಾಡೆಮಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಸಂಸ್ಥೆಯ 6ನೇ ವಾಷರ್ಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ನಾಗರಿಕತೆ ಬೆಳದಂತೆಲ್ಲ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಯಾಗುತ್ತಿದ್ದು, ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಪ್ರಸಕ್ತ ದಿನಗಳಲ್ಲಿ ನಾವೆಲ್ಲರೂ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಅಂದಾಗ ಮಾತ್ರ ದೈನಂದಿನ ಬದುಕಿನಲ್ಲಿ ಎದುರಾಗುವ ಎಲ್ಲ ಸಮಸ್ಯೆಗಳನ್ನು ಎದುರಿಸುವ ಜತೆಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.

    ಶಿಕ್ಷಕರು ಮಕ್ಕಳಲ್ಲಿನ ಆಸಕ್ತಿಗಳನ್ನು ಗಮನಿಸಿ, ಗುಣಮಟ್ಟದ ಬೋಧನೆ ಜತೆಗೆ ಉತ್ತಮ ಸಂಸ್ಕಾರ ಕೊಡಬೇಕು. ಇಂದು ದೇಶದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಅಪಾರ ಬದಲಾವಣೆಯನ್ನು ಕಾಣುತ್ತಿದ್ದೇವೆ, ಆಡಳಿತ ಮಂಡಳಿಯವರು ಹಾಗೂ ಶಿಕ್ಷಕರು ಶಿಕ್ಷಣಕ್ಕೆ ಹೊಸ ದಿಕ್ಕನ್ನೂ ತೋರಿಸುವ ಮೂಲಕ ಅವರಲ್ಲಿ ಆತ್ಮ ವಿಶ್ವಾಸ ಮೂಡಿಸಿ. ಸ್ಪಧರ್ಾ ಮನೋಭಾವನೆ ಮೂಡಿಸಬೇಕು. ಸಮಾಜದಲ್ಲಿ ಹಲವು ಜನರ ಬಳಿ ಸಾಕಷ್ಟು ಹಣವಿದೆ, ಆದರೆ ಸಮಾಜದ ಯಾವುದಾದರೊಂದು ಕ್ಷೇತ್ರಕ್ಕೆ ಕೊಡುಗೆ ನೀಡಬೇಕೆಂಬ ಅಚಲ ನಿಧರ್ಾರ, ಶ್ರದ್ಧೆ, ಪರಿಶ್ರಮ ಕೆಲವರಲ್ಲಿ ಮಾತ್ರ ಕಾಣುತ್ತೇವೆ ಎಂದು ಹೇಳಿದರು.

    ವಿಜ್ಞಾನ ವಸ್ತು ಪ್ರದರ್ಶನಕ್ಕೆ ಶಾಸಕ ಚನ್ನಾರಡ್ಡಿ ತುನ್ನೂರ ಚಾಲನೆ ನೀಡಿ, ವಿಧ್ಯಾಥರ್ಿಗಳ ಜ್ಞಾನ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. 6 ವರ್ಷಗಳಲ್ಲಿ ಶಿಕ್ಷಣ ಸಂಸ್ಥೆಯಲ್ಲಿ 800ಕ್ಕೂ ಹೆಚ್ಚು ವಿದ್ಯಾಥರ್ಿಗಳು ಅಭ್ಯಾಸ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ. ಶಾಲೆಯ ಆವರಣದಲ್ಲಿ ಉತ್ತಮ ಪರಿಸರ ನಿಮರ್ಾಣ ಮಾಡಿರುವುದು ಪ್ರಮುಖವಾಗಿದೆ, ಇದು ಮಕ್ಕಳ ಬೋಧನೆ ಮೇಲೆ ಸಕರಾತ್ಮಕ ಪರಿಣಾಮ ಬೀರುತ್ತದೆ ಎಂದು ಸಲಹೆ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts