More

    ಬದುಕಿನಲ್ಲಿ ಬಸವ ಸಂಸ್ಕೃತಿ ಪಾಲಿಸಿ

    ದೇವರಹಿಪ್ಪರಗಿ: ಬಸವ ಸಂಸ್ಕೃತಿಯನ್ನು ಜೀವನದಲ್ಲಿ ರೂಢಿಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ ಎಂದು ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಸ್.ಎನ್.ಬಸವರೆಡ್ಡಿ ಹೇಳಿದರು.

    ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಶನಿವಾರ ಅವರು ಮಾತನಾಡಿ, ಬಸವಣ್ಣನವರ ಸಾಂಸ್ಕೃತಿಕ ಆಚಾರ, ವಿಚಾರಗಳನ್ನು ತಿಳಿದು ಪಾಲಿಸಿದಾಗ ಮಾತ್ರ ಜೀವನಕ್ಕೆ ಸಾರ್ಥಕತೆ ಬಂದಂತಾಗುತ್ತದೆ ಎಂದರು.

    ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಕುದರಿ, ಬಸವಶರಣ ಸಂಗಮ ಸಮಿತಿ ಅಧ್ಯಕ್ಷ ಸಂಗಣ್ಣ ತಡವಲ್, ಉಪತಹಸೀಲ್ದಾರ್ ಸುರೇಶ ಮ್ಯಾಗೇರಿ, ಕಸಾಪ ತಾಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ ಮಾತನಾಡಿದರು.

    ತಹಸೀಲ್ದಾರ್ ಪ್ರಕಾಶ ಸಿಂದಗಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಅಶೋಕ ಹೆಗಡೆ, ಚುಟುಕ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಸಿ.ಹಿರೇಮಠ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ, ಕಿರಿಯ ಆರೋಗ್ಯ ನಿರೀಕ್ಷಕ ಫಿರೋಜ್ ಮುಲ್ಲಾ, ಸದಸ್ಯರಾದ ಕಾಶೀನಾಥ ಭಜಂತ್ರಿ, ಸಿಂಧೂರ ಡಾಲೇರ, ಚೈತನ್ಯ ಶಾಲೆಯ ಸಂಸ್ಥಾಪಕ ಗುರುರಾಜ ಕುಲಕರ್ಣಿ, ಜೆ.ಆರ್.ಬಿರಾದಾರ, ಪಂಚಾಕ್ಷರಿ ಮಿಂಚನಾಳ, ಗೊಲ್ಲಾಳಪ್ಪ ಬಿರಾದಾರ, ಶಾಂತಪ್ಪ ಪಡನೂರ, ಬಸವರಾಜ ದೇವಣಗಾಂವ, ಕಾಸಪ್ಪ ಕುಂಬಾರ, ಕಾಶೀನಾಥ ರಾಮಗೊಂಡ, ಬಸವರಾಜ ಕುಂಬಾರ ಇತರರಿದ್ದರು.

    ಇದೇ ವೇಳೆ ಬಸವೇಶ್ವರ ಸಾಂಸ್ಕೃತಿಕ ಭವನ ನಿರ್ಮಿಸಲು ತಾಲೂಕು ಆಡಳಿತಕ್ಕೆ ವಿವಿಧ ಪರಿಷತ್ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಪಟ್ಟಣದ ವಿಜಯಪುರ ರಸ್ತೆಯಲ್ಲಿನ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts