More

    ಬಸವೇಶ್ವರ, ಹೇಮರೆಡ್ಡಿ ಮಲ್ಲಮ್ಮ ಜಯಂತಿ ಸರಳ ಆಚರಣೆ

    ಬಾಗಲಕೋಟೆ: ಜಿಲ್ಲಾಡಳಿತದ ವತಿಯಿಂದ ಜಗಜ್ಯೋತಿ ಬಸವೇಶ್ವರ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಚುನಾವಣಾ ನೀತಿ ಸಂಹಿತೆ ಹಿನ್ನಲೆಯಲ್ಲಿ ಶುಕ್ರವಾರ ಸರಳವಾಗಿ ಆಚರಿಸಲಾಯಿತು.

    ಜಿಲ್ಲಾಡಳಿತ ಭವನದಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಸಂತೋಷ್ ಜಗಲಾಸರ ಮಹನೀಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ಅರ್ಪಿಸಿದರು.

    ಈ ಸಂದರ್ಭದಲ್ಲಿ ಬಾಗಲಕೋಟೆ ತಹಶೀಲ್ದಾರ ಅಮರೇಶ ಪಮ್ಮಾರ, ಶಾಲಾ ಶಿಕ್ಷಣ‌ ಇಲಾಖೆಯ ಉಪನಿರ್ದೇಶಕ ಬಿ.ಕೆ.ನಂದನೂರ, ಪದವಿ ಪೂರ್ವ ಶಿಕ್ಷಣ‌ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪೂರ ಸೇರಿದಂತೆ ಸಮಾಜದ ಮುಖಂಡರಾದ ಮಹೇಶ ಕಕರೆಡ್ಡಿ, ವೀರನಗೌಡ ಪಾಟೀಲ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts