

ಚಿತ್ರದುರ್ಗ: ಚಳ್ಳಕೆರೆ ತಾಲೂಕು ಹಿರೇಹಳ್ಳ ಟೋಲ್, ಚಿಕ್ಕನೇಹಳ್ಳಿ ಗೇಟ್ ಬಳಿ ಶುಕ್ರವಾರ ಬೆಳಗಿನ ಜಾವ ಟ್ಯಾಕ್ಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಈ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಬೆಂಗಳೂರಿಂದ ಕಲಬುರಗಿಗೆ ಮದುವೆಗೆಂದು ತೆರಳಿದ್ದ 39 ವಯಸ್ಕರು ಹಾಗೂ ಏಳು ಮಕ್ಕಳಿದ್ದ ಈ ರಾಜಹಂಸ ಬಸ್ಸಿನಲ್ಲಿದ್ದರು. ಮ ದುವೆ ಮುಗಿಸಿಕೊಂಡು ಬೆಂಗಳೂರಿಗೆ ಹಿಂತಿರುಗುವಾಗ ಇಟ್ಟಿಗೆ ಲೋಡ್ ಇದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಬಸ್‌ಡಿಕ್ಕಿ ಹೊಡೆದು ಈ ಅವ ಘಡವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಗಾಯಾಳುಗಳನ್ನು ಚಳ್ಳಕೆರೆ ಹಾಗೂ ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸ ಲಾಗಿದೆ.