More

    ಬಸ್ ಸಂಚಾರ ತಡೆದು ದಿಢೀರ್ ಪ್ರತಿಭಟನೆ

    ಹನೂರು: ಸಮರ್ಪಕ ಬಸ್ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಬುಧವಾರ ತಾಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ಸಂಚಾರ ತಡೆದು ದಿಢೀರ್ ಪ್ರತಿಭಟನೆ ನಡೆಸಿದರು.

    ವಿದ್ಯಾರ್ಥಿಗಳು ಮಾತನಾಡಿ, ಈ ಭಾಗದಲ್ಲಿ ಲೊಕ್ಕನಹಳ್ಳಿ ಸೇರಿದಂತೆ ಬೈಲೂರು, ಹುತ್ತೂರು, ಒಡೆಯರಪಾಳ್ಯ, ಪಿ.ಜಿ. ಪಾಳ್ಯ, ಕಂಡಯ್ಯನಪಾಳ್ಯ, ಚಿಕ್ಕಮಾಲಾಪುರ ಹಾಗೂ ಚನ್ನಾಲಿಂಗನಹಳ್ಳಿ ಗ್ರಾಮದಿಂದ ಸುಮಾರು 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊಳ್ಳೇಗಾಲದ ಶಾಲಾ-ಕಾಲೇಜುಗಳಿಗೆ ತೆರಳುತ್ತಿದ್ದೇವೆ. ಬೆಳಗ್ಗಿನ ವೇಳೆ 2 ಕೆಎಸ್ಸಾರ್ಟಿಸಿ ಬಸ್ ಮಾತ್ರ ಸಂಚರಿಸುತ್ತಿವೆ. ಇದರಿಂದ ಪ್ರತಿನಿತ್ಯ ಸಾರ್ವಜನಿಕರೊಡನೆ ಕಿಕ್ಕಿರಿದ ಬಸ್‌ನಲ್ಲಿ ನಿಂತುಕೊಂಡೇ ತೆರಳಬೇಕಿದ್ದು, ತುಂಬಾ ತೊಂದರೆ ಅನುಭವಿಸುತ್ತಿದ್ದೇವೆ. ಸಮರ್ಪಕ ಬಸ್ ಸೌಕರ್ಯ ಕಲ್ಪಿಸುವಂತೆ ಕೊಳ್ಳೇಗಾಲ ಡಿಪೋ ವ್ಯವಸ್ಥಾಪಕರಿಗೆ ಹಲವು ಬಾರಿ ಮನವಿ ಮಾಡಲಾಗಿದೆ. ಅದರೆ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ, ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಸುದ್ದಿ ತಿಳಿದು ಪೊಲೀಸ್ ಕಾನ್‌ಸ್ಟೆಬಲ್ ಬಂಗಾರನಾಯ್ಕ ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿ ಈ ಬಗ್ಗೆ ಇನ್ಸ್‌ಪೆಕ್ಟರ್ ಸಂತೋಷ್ ಕಶ್ಯಪ್ ಅವರಿಗೆ ಮಾಹಿತಿ ತಿಳಿಸಿದರು. ಕೂಡಲೇ ಘಟಕ ವ್ಯವಸ್ಥಾಪಕ ಮುತ್ತುರಾಜು ಅವರಿಗೆ ಇನ್ಸ್‌ಪೆಕ್ಟರ್ ಫೋನಾಯಿಸಿ ಈ ಬಗ್ಗೆ ತಿಳಿಸಿದರು. ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಗುರುವಾರದಿಂದಲೇ ಸಮರ್ಪಕ ಬಸ್ ಸೌಕರ್ಯ ಕಲ್ಪಿಸುವುದಾಗಿ ಮುತ್ತುರಾಜು ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಕೈಬಿಟ್ಟರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts