More

    ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

    ನಾಗರಮುನ್ನೋಳಿ: ಮುಗಳಿ, ಕಮತ್ಯಾನಟ್ಟಿ ಗ್ರಾಮಗಳಿಗೆ ನಿಗದಿತ ಸಮಯಕ್ಕೆ ಕೆಎಸ್‌ಆರ್‌ಟಿಸಿ ಬಸ್ ಬಿಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಮುಗಳಿ ಕ್ರಾಸ್ ಬಳಿಯ ಹುಕ್ಕೇರಿ-ಚಿಕ್ಕೋಡಿ ರಾಜ್ಯ ಹೆದ್ದಾರಿ ಸಂಚಾರ ತಡೆದು ಶುಕ್ರವಾರ ದಿಢೀರ್ ಪ್ರತಿಭಟನೆ ನಡೆಸಿದರು.

    ಕಮತ್ಯಾನಟ್ಟಿ ಹಾಗೂ ಮುಗಳಿ ಗ್ರಾಮದಿಂದ ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು ಮಜಲಟ್ಟಿ ಸರ್ಕಾರಿ ಪ್ರೌಢಶಾಲೆಗೆ ಹೋಗುತ್ತೇವೆ. ಸಮಯಕ್ಕೆ ಸರಿಯಾಗಿ ಬಸ್ ಬಾರದೆ ತೊಂದರೆಯಾಗುತ್ತಿದೆ. ಬಸ್ ಸೌಕರ್ಯ ಕಲ್ಪಿಸುವಂತೆ ಹಲವು ಬಾರಿ ಮನವಿ ಮಾಡಿದರೂ, ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಸ್ಥಳಕ್ಕೆ ಸಾರಿಗೆ ಅಧಿಕಾರಿಗಳು ಬರುವಂತೆ ಬಿಗಿಪಟ್ಟು ಹಿಡಿದರು. ಪ್ರತಿಭಟನೆ ಕಾವು ಜೋರಾಗುತ್ತಿದ್ದಂತೆ ಅಧಿಕಾರಿಗಳು ಆಗಮಿಸಿ ಮನವಿ ಸ್ವೀಕರಿಸಿ, ಬಸ್ ಓಡಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದರು. ಆನಮ್ಮ ಚೌಗಲಾ, ಅಶ್ವಿನಿ ಕುಂಬಾರಿ, ವಾಸಂತಿ ಬಡಿಗೇರ, ಆಕಾಶ ಮುನ್ನೋಳ್ಳಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts