More

    ಬಾಗಲಕೋಟೆಗೆ ಅಂತರರಾಷ್ಟ್ರೀಯ ಹಾಕಿ ಮೈದಾನ

    ಬಾಗಲಕೋಟೆ: ಬಾಗಲಕೋಟೆಯಲ್ಲಿ ಅಂತರರಾಷ್ಟ್ರೀಯ ಹಾಕಿ ಮೈದಾನ ನಿರ್ಮಾಣಕ್ಕೆ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದಿಂದ ೧೦ ರಿಂದ ೧೨ ಎಕರೆ ಜಮೀನು ನೀಡಲು ಒಪ್ಪಿಗೆ ನೀಡಲಾಗಿದೆ ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು.
    ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಸಭಾಭವನದಲ್ಲಿ ಸೋಮವಾರ ವಿವಿಧ ಸಂತ್ರಸ್ತರಿಗೆ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ಕೇಲೋ ಇಂಡಿಯಾ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಅಂತರರಾಷ್ಟ್ರೀಯ ಹಾಕಿ ಮೈದಾನ ನಿರ್ಮಾಣಕ್ಕೆ ಅನುದಾನ ನೀಡುತ್ತಿದ್ದು, ಮೈದಾನ ನಿರ್ಮಾಣಕ್ಕೆ ೧೦ ರಿಂದ ೧೨ ಎಕರೆ ಜಾಗ ನೀಡುವಂತೆ ಜಿಲ್ಲಾಧಿಕಾರಿಗಳು ಬಿಟಿಡಿಎಗೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಜಾಗ ನೀಡಲು ಸಭೆಯಲ್ಲಿ ತಿರ್ಮಾನಿಸಲಾಗಿದೆ ಎಂದು ತಿಳಿಸಿದರು.
    ಸಮಾಜ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ, ೧೬ ಅಂಗನವಾಡಿ ಕಟ್ಟಡ ನಿರ್ಮಾಣ ಹಾಗೂ ಅಂಬೇಡ್ಕರ ಅಭಿವೃದ್ಧಿ ನಿಗಮದಲ್ಲಿ ೬ ನಿಗಮಗಳು ಬರುತ್ತಿದ್ದು, ಕಚೇರಿ ನಿರ್ಮಾಣಕ್ಕೆ ಜಾಗ ನೀಡುವುದಾಗಿ ಒಪ್ಪಿಗೆ ನೀಡಲಾಗಿದೆ. ಅಲ್ಲದೇ ಒಟ್ಟು ೭.೫ ಕೋಟಿ ರೂ.ಗಳ ೬ ವಿವಿಧ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ಸಹ ನೀಡಲಾಗಿದೆ ಎಂದು ಹೇಳಿದರು.
    ಕಾರ್ಯಕ್ರಮದಲ್ಲಿ ೨೪ ಮುಖ್ಯ ಸಂತ್ರಸ್ತರು, ೪೬ ಮುಖ್ಯ ಸಂತ್ರಸ್ತ ವಯಸ್ಕರ ಮಕ್ಕಳು, ೧೩ ಜನ ಬಾಡಿಗೆದಾರರು, ೮ ಅತೀಕ್ರಮಣದಾರರು, ಒಬ್ಬರು ಅತಿಥಿ ಕುಟುಂಬಸ್ಥರು ಹಾಗೂ ೧೦ ವಾಣಿಜ್ಯದಾರರು ಸೇರಿ ಒಟ್ಟು ೧೦೨ ಸಂತ್ರಸ್ತರಿಗೆ ನಿವೇಶನಗಳ ಹಕ್ಕುಪತ್ರಗಳನ್ನು ವಿತರಿಸಿದರು. ಇಲ್ಲಿಯವರೆಗೆ ಒಟ್ಟು ೨೨೩೦ ಜನ ಸಂತ್ರಸ್ತರಿಗೆ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಹಕ್ಕು ಪತ್ರಗಳನ್ನು ಪಡೆದುಕೊಂಡವರು ಒಂದು ವರ್ಷದಲ್ಲಿ ಮನೆಗಳನ್ನು ಕಟ್ಟಿಕೊಳ್ಳಬೇಕು. ಕಟ್ಟದಿದ್ದಲ್ಲಿ ನಿವೇಶನ ವಾಪಸ್ ಪಡೆದುಕೊಳ್ಳಲಾಗುವುದು ಎಂದು ಸಂತ್ರಸ್ತರಿಗೆ ತಿಳಿಸಿದರು.
    ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಽಕಾರದ ಸದಸ್ಯರಾದ ಜಿ.ಜಿ.ಯಳ್ಳಿಗುತ್ತಿ, ಶಿವಾನಂದ ಟವಳಿ, ಬಿಟಿಡಿಎ ಮುಖ್ಯ ಅಭಿಯಂತರ ಮನ್ಮಥಯ್ಯಸ್ವಾಮಿ, ಪುನರ್ವಸತಿ ಅಧಿಕಾರಿ ಗಣಪತಿ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts