More

    ಬಾಲಕನ ಹತ್ಯೆ ಖಂಡಿಸಿ ಪ್ರತಿಭಟನೆ

    ಮೈಸೂರು: ರಾಜಸ್ಥಾನದ ಜೈಪುರದಲ್ಲಿ ಬಾಲಕನ ಅಮಾನುಷ ಹತ್ಯೆ ಖಂಡಿಸಿ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ವತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

    ಮಾನಸಗಂಗೋತ್ರಿಯ ಅಂಬೇಡ್ಕರ್ ಪ್ರತಿಮೆ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
    3ನೇ ತರಗತಿಯ ದಲಿತ ವಿದ್ಯಾರ್ಥಿ ಕುಡಿಯುವ ನೀರಿನ ಮಡಕೆಯನ್ನು ಮುಟ್ಟಿದ ಎಂಬ ಕಾರಣಕ್ಕೆ ಶಿಕ್ಷಕನಿಂದ ಹಲ್ಲೆಗೊಳಗಾಗಿ ಮೃತಪಟ್ಟಿದ್ದಾನೆ. ಇದು ಅಮಾನವೀಯ ಕೃತ್ಯ ಎಂದು ಕಿಡಿಕಾರಿದರು.

    ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರಗಳಂತಹ ಪ್ರಕರಣಗಳು ಕಡಿಮೆ ಆಗುತ್ತಿಲ್ಲ. ಬದಲಿಗೆ ದಿನೇ ದಿನೆ ಹೆಚ್ಚಾಗುತ್ತಿವೆ. ದಲಿತರಿಗೆ ರಕ್ಷಣೆ ಕೊಡುವಲ್ಲಿ ಆಳುವ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿದರು. ತಪ್ಪಿತಸ್ಥ ಶಿಕ್ಷಕನಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.

    ಸಂಘದ ಅಧ್ಯಕ್ಷ ನಟರಾಜ್ ಶಿವಣ್ಣ, ಪದಾಧಿಕಾರಿಗಳಾದ ಕಲ್ಲಹಳ್ಳಿ ಕುಮಾರ್, ಅವಿನಾಶ್, ರಂಗನಾಥ್, ರಂಗಸ್ವಾಮಿ ಇನ್ನಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts