More

    ಬಾಲ್ಯ ವಿವಾಹ ತಡೆಗೆ ಕೈ ಜೋಡಿಸಿ

    ಸುರಪುರ : ಇಂದಿನ ಆಧುನಿಕ ಕಾಲಘಟ್ಟದಲ್ಲಿಯೂ ಬಾಲ್ಯ ವಿವಾಹ ನಡೆಯುತ್ತಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಹೀಗಾಗಿ ಬಾಲ್ಯ ವಿವಾಹ ತಡೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಹಿರಿಯ ನ್ಯಾಯಾಧೀಶ ಮಲ್ಲಿಕಾರ್ಜುನ ಕಮತಗಿ ಹೇಳಿದರು.

    ನಗರದ ವೇಣುಗೋಪಾಲ ಸ್ವಾಮಿ ದೇವಸ್ಥಾನ ಆವರಣದಲ್ಲಿ ಗುರುವಾರ ಹಮ್ಮಿಕೊಂಡ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಳಿವಯಸ್ಸಿನಲ್ಲಿಯೇ ವಿವಾಹ ಮಾಡುವುದು ಕಾನೂನು ಪ್ರಕಾರ ಅಪರಾಧ. ಇದನ್ನು ತಡೆಯಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಕಿವಿ ಮಾತು ಹೇಳಿದರು.

    ವಿವಾಹ ಕಾಯ್ದೆ ಪ್ರಕಾರವೇ ಮದುವೆ ಮಾಡಬೇಕು. ನಿಮ್ಮ ಸುತ್ತಮುತ್ತಲು ಬಾಲ್ಯ ವಿವಾಹ ಕಂಡು ಬಂದರೆ ಅದನ್ನು ತಡೆದು ತಕ್ಷಣಕ್ಕೆ ನಮ್ಮ ಗಮನಕ್ಕೆ ತಂದಾಗ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.

    ಸಿವಿಲ್ ನ್ಯಾಯಾಧೀಶ ಮಾರುತಿ ಕೆ. ಮಾತನಾಡಿ, ಬಾಲ್ಯ ವಿವಾಹ ಪದ್ಧತಿ ನಿಷೇಧಿಸಲಾಗಿದ್ದು, ಅಪ್ರಾಪ್ತರಿಗೆ ವಿವಾಹ ಮಾಡಿದರೆ ಕಾನೂನು ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ. ಹೆಣ್ಣಿಗೆ ೧೮, ಗಂಡಿಗೆ ೨೧ ವರ್ಷ ತುಂಬಿದ ಬಳಿಕವೇ ವಿವಾಹ ಮಾಡಬೇಕು ಎಂದರು.

    ಹೆಚ್ಚುವರಿ ನ್ಯಾಯಾಧೀಶ ಬಸವರಾಜ, ಬಿಇಒ ವಸಂತ, ಬಿಆರ್‌ಸಿ ಪಂಡಿತ ನಿಂಬೂರಿ, ಬಿಆರ್‌ಪಿ ಖಾದರ್ ಪಟೇಲ್, ಸಿಆರ್‌ಪಿ ಶ್ರೀಶೈಲ ಯಂಕAಚಿ, ಮುಖ್ಯಗುರು ವಿಶ್ವರಾಜ, ಸರ್ಕಾರಿ ಅಭಿಯೋಜಕರಾದ ಸುರೇಶ ಪಾಟೀಲ್, ಮರೆಯಪ್ಪ ಹೊಸ್ಮನಿ, ವಕೀಲ ಸಂಘದ ಅಧ್ಯಕ್ಷ ರಮಾನಂದ ಕವಲಿ, ವಕೀಲ ಮಂಜುನಾಥ, ಭೀಮಣ್ಣ ಬನಸೋಡೆ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts