More

    ಬಾಲ್ಯ ವಿವಾಹ ತಡೆಗೆ ಪಾಲಕರು ಸಹಕರಿಸಿ


    ಹಾಸನ: ಬಾಲ್ಯ ವಿವಾಹ ಪದ್ಧತಿ ನಿರ್ಮೂಲನೆಯಾಗಬೇಕಿದ್ದು, ತಡೆಗೆ ಪಾಲಕರೂ ಸಹಕಾರ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿ.ಎಲ್.ಅಮರ್ ಸಲಹೆ ನೀಡಿದರು.
    ಹೊಳೆನರಸೀಪುರ ತಾಲೂಕಿನ ಆಲದಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ತಾಲೂಕು ಕಾನೂನು ಸೇವಾ ಸಮಿತಿ ವಕೀಲರ ಸಂಘ ಹಾಗೂ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿ ನಿರ್ಮೂಲನೆಯಾಗಬೇಕಾದರೆ ಸಾರ್ವಜನಿಕರು, ಪಾಲಕರ ಸಹಕಾರ ಮುಖ್ಯವಾಗಿರುತ್ತದೆ. ನಾಗರಿಕರು ಬಾಲ್ಯ ವಿವಾಹ ಪ್ರಕರಣಗಳು ಕಂಡು ಬಂದರೆ ಸಹಾಯವಾಣಿ 1098 ಹಾಗೂ 1091 ಸಂಖ್ಯೆಗೆ ಮಾಹಿತಿ ನೀಡಬೇಕು. ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದರು.


    2006ರಿಂದಲೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಆದರೂ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಪ್ರಕರಣಗಳು ನಡೆಯುತ್ತಿವೆ. ಎಷ್ಟೇ ಅರಿವು ಮೂಡಿಸಿದರೂ ಸಂಪೂರ್ಣ ನಿಷೇಧವಾಗದೆ ಇರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕಳವಳ ವ್ಯಕ್ತಪಡಿಸಿದರು. ಮುಖ್ಯಶಿಕ್ಷಕಿ ರಾಹತ್ ಉನ್ನಿಸಾ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂಸಿ ಅಧ್ಯಕ್ಷ ಯೋಗೇಶ್, ಲಯನ್ಸ್ ಕ್ಲಬ್ ವಲಯ್ಯಧ್ಯಕ್ಷ ಮಹಮ್ಮದ್ ಖಾಲಿದ್, ವಕೀಲ ರವೀಶ್, ಶಾಲೆ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts