More

    ಬಾಲ್ಯ ವಿವಾಹ ತಡೆಗೆ 1098ಕ್ಕೆ ಕರೆ ಮಾಡಿ

    ಮುಂಡಗೋಡ: ತಾಲೂಕಿನಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವ ಪ್ರಕರಣ ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098ಕ್ಕೆ ಕರೆ ಮಾಡಿ ತಿಳಿಸಬೇಕು ಎಂದು ಪ್ರಭಾರ ಸಿಡಿಪಿಒ ದೀಪಾ ಬಂಗೇರ ಹೇಳಿದರು.

    ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಕಾರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮುಂಡಗೋಡದ ಶಿಶು ಅಭಿವೃದ್ಧಿ ಯೋಜನೆ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ತಾಲೂಕಿನ ಹುನಗುಂದ ಗ್ರಾಮದ ಪ್ರೌಢಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಶಾಲಾ ಮಕ್ಕಳಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಮತ್ತು ಮಹಿಳೆ ಮತ್ತು ಮಕ್ಕಳ ಅನೈತಿಕ ಸಾಗಣೆ ತಡೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಶಿಕ್ಷಕ ರಮೇಶ ಅಂಬಿಗೇರ, ಇತಿಹಾಸದಲ್ಲಿ ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಸ್ಥಾನಮಾನ ಹಾಗೂ ಸ್ವತಂತ್ರ ಪೂರ್ವ ಮತ್ತು ಸ್ವತಂತ್ರ ನಂತರ ಹೆಣ್ಣು ಮಕ್ಕಳ ಶಿಕ್ಷಣ, ಸ್ಥಾನಮಾನಗಳಲ್ಲಿ ಆದ ಬದಲಾವಣೆಗಳ ಕುರಿತು ಮಾಹಿತಿ ನೀಡಿದರು. ಮುಖ್ಯೋಪಾಧ್ಯಾಪಕಿ ಅಕ್ಕಮ್ಮಾ ಗಾಣಿಗೇರ ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಮತ್ತು ಲಿಂಗ ತಾರತಮ್ಯ ಕುರಿತು ತಿಳಿಸಿದರು.

    ಹುನಗುಂದ ಗ್ರಾ.ಪಂ. ಅಧ್ಯಕ್ಷ್ಯೆ ಯಲ್ಲವ್ವ ಇಟ್ಲಾಪುರ ಕಾರ್ಯಕ್ರಮ ಉದ್ಘಾಟಿಸಿದರು. ವಲಯ ಮೇಲ್ವಿಚಾರಕಿ ಫಾತಿಮಾ ಕಿತ್ತೂರ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಇದ್ದರು. ವಿಶಾಲಾಕ್ಷಿ ರಾಣಿಗೇರ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts