More

    ಬಾಲ ಕಾರ್ಮಿಕರಿದ್ದರೆ ದೂರು ನೀಡಿ, ನ್ಯಾಯಾಧೀಶ

    ಚಿತ್ರದುರ್ಗ: ಬಾಲಕಾರ್ಮಿಕರನ್ನು ಗುರುತಿಸಿ ಸಮಾಜದ ಮುಖ್ಯವಾಹಿನಿಗೆ ತರಲು, ವಿವಿಧ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಕೈಜೋಡಿಸನ ಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ‌್ಯದರ್ಶಿ ಎಂ.ವಿಜಯ್ ಹೇಳಿದರು.
    ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ, ಪಪೂ ಶಿಕ್ಷಣ, ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾ ರ್ಮಿಕ(ನಿಷೇಧ ಮತ್ತು ನಿಯಂತ್ರಣ)ಕಾಯ್ದೆ 1986ರ ತಿದ್ದುಪಡಿ 2016ರ ಕುರಿತ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
    ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ 15 ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಒಂದಾಗಿ ಶ್ರಮಿಸ ಬೇಕಿದೆ. ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಸೇರಿಸುವ ಮೂಲಕ ಅವರನ್ನು ಮುಖ್ಯವಾಹಿನಿಗೆ ತರಬೇಕು. 14ವರ್ಷ ದೊಳಗಿನ ಮಕ್ಕಳು ಕೆಲಸದಲ್ಲಿದ್ದರೆ ಹಾಗೂ ಕಿಶೋರರು ಅಪಾಯಕಾರಿ ಉದ್ದಿಮೆ ಗಳಲ್ಲಿದ್ದರೆ ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡುವಂತೆ ನಾಗರಿಕರಿಗೆ ಮನವಿ ಮಾಡಿದರು.
    ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ದೇಶಕ್ಕೆ ಅಂಟಿದ ಶಾಪ. ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಕಾರ್ಯ ನಮ್ಮೆಲ್ಲರ ಮೇಲಿದೆ ಎಂದರು. ಶಾಲಾ ಆವರಣದಿಂದ ಪ್ರಾರಂಭವಾದ ಜಾಥಾ ಗಾಂಧಿವೃತ್ತ, ಮುಖ್ಯಅಂಚೆ ಕಚೇರಿ ಮಾರ್ಗ, ಕೆಎಸ್ ಆರ್‌ಟಿಸಿ ಬಸ್ ನಿಲ್ದಾಣ,ಸಂತೆಹೊಂಡ ಮಾರ್ಗದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ,ಡಿಸಿ ಕಚೇರಿ ಆವರಣಕ್ಕೆ ತಲುಪಿತು.
    ಕೂಲಿಬಿಡಿಸಿ,ಶಾಲೆಗೆ ಕಳುಹಿಸಿ, ಮಕ್ಕಳ ಸಹಾಯವಾಣಿ 1098 ಗೆ ಕರೆಮಾಡಿ, ಶಿಕ್ಷಣವಿಲ್ಲದ ಬಾಳು ಅಂಧಕಾರದ ಗೋಳು, ಮಕ್ಕಳ ದುಡಿಮೆ ರಾಷ್ಟ್ರಕಳಂಕ, ಸ್ಲೇಟು ಬಳಪ ಕೈಗೆ ಕೊಡಿ, ಬಾಲಕಾರ್ಮಿಕರ ನೇಮಕ, ಮಕ್ಕಳನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂಬಿತ್ಯಾದಿ ಫಲಕ ಗಳು ಜಾಥಾದಲ್ಲಿ ಗಮನ ಸೆಳೆದವು.
    ಜಿಲ್ಲಾ ಕಾರ್ಮಿಕರ ಅಧಿಕಾರಿ ಜಿ.ಆರ್.ಇಬ್ರಾಹಿಂಸಾಬ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಪ್ರಭಾಕರ್, ನಗರಸಭೆ ಆಯುಕ್ತೆ ಎಂ.ರೇಣು ಕಾ, ಕಾರ್ಮಿಕ ನಿರೀಕ್ಷರಾದ ಡಿ.ರಾಜಣ್ಣ, ಕುಸುಮಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರಾ, ನಗರ ಠಾಣೆ ಪಿಐ ಜೆ.ತಿಪ್ಪೇಸ್ವಾಮಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್‌ಕುಮಾರ್, ಕಾ ರ್ಮಿಕ ಇಲಾಖೆ ವಿಷಯ ನಿರ್ವಾಹಕ ತೀರ್ಥಪ್ರಸಾದ್, ಬಾಲಕಿಯರ ಸರ್ಕಾರಿ ಪಪೂ ಕಾಲೇಜು ಪ್ರಾಚಾರ‌್ಯ ಎಚ್.ನಾಗರಾಜ್ ಮತ್ತಿತರರು ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts