More

    ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ

    ಚಿತ್ರದುರ್ಗ: ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂ ಚಿಸಿದರು. ಡಿಸಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾಮಟ್ಟದ ಕಾರ್ಯಪಡೆ ಹಾಗೂ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜೀತಪದ್ಧತಿ ಹೇಗೆ ಶಾಪವೊ ಅದೇ ರೀತಿ ಬಾಲಕಾರ್ಮಿಕ ಪದ್ಧತಿ ಕೂಡ ಸಮಾಜಕ್ಕೆ ಮಾರಕವಾಗಿದೆ.

    ಬಾಲ್ಯ, ಕಿಶೋರಾವಸ್ಥೆ ಕಾರ್ಮಿಕರ ಪತ್ತೆಗೆ ಪರಿಣಾಮಕಾರಿ ದಾಳಿ ನಡೆಸಿ, ತಪಾಸಣೆ ಮಾಡಬೇಕು. ಬಾಲಕಾರ್ಮಿಕ ಪದ್ಧತಿ ನಿ ರ್ಮೂಲನೆ ಕ್ರಮ ವಹಿಸ ಬೇಕು. ಆದ್ದರಿಂದ ಹೊರ ಬಂದ ಮಕ್ಕಳಿಗೆ ಶಿಕ್ಷಣ ಸಿಗುವಂತೆ ನೋಡಿಕೊಂಡು ಅವರನ್ನು ಸಮಾಜದ ಮು ಖ್ಯವಾಹಿನಿಗೆ ತರಬೇಕೆಂದರು.
    ಜಿಲ್ಲೆಯಲ್ಲಿ 440 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಶಾಲೆಬಿಟ್ಟ ಮಕ್ಕಳನ್ನು ಮುಖ್ಯವಾಹಿನಿಗೆ ಕರೆತರಲು ಕ್ರಮವಹಿಸಲಾಗುತ್ತಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

    ಕಾರ್ಮಿಕ ಅಧಿಕಾರಿ ಇಬ್ರಾಹಿಂ ಮಾತನಾಡಿ, ಬಾಲ್ಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರನ್ನು ಪತ್ತೆ ಹಚ್ಚಲು ತಪಾಸಣೆ ಹಾಗೂ ಪು ನರ್ವಸತಿ ಕಲ್ಪಿಸುವ ಸಲುವಾಗಿ ಈಗಾಗಲೇ ಜಿಲ್ಲಾಮಟ್ಟದ ಕಾರ್ಯಪಡೆ ರಚಿಸಲಾಗಿದೆ ಎಂದರು. ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್‌ಕುಮಾರ್, ಕಾರ್ಮಿಕ ನಿರೀಕ್ಷಕ ಡಿ.ರಾಜಣ್ಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣ ಕಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ ಮತ್ತಿತರರು ಇದ್ದರು.

    ಚಿತ್ರದುರ್ಗದಲ್ಲಿ ಮಂಗಳವಾರ ನಡೆದ ಜನನ-ಮರಣ ನೋಂದಣಿ ಜಿಲ್ಲಾಮಟ್ಟದ ಸಮಿತಿ ಸಭೆಯಲ್ಲಿ ಎಡಿಸಿ ಬಿ.ಟಿ. ಕುಮಾರ ಸ್ವಾಮಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್,ಎಚ್.ಶಶಿರೇಖಾ, ಡಾ.ಎನ್.ಕಾಶಿ, ಡಾ.ಆನಂದ್‌ಪ್ರಕಾಶ್,ಡಾ.ಬಿ.ವಿ.ಗಿರೀಶ್ ಮತ್ತಿತರರು ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts