More

    ಬಾಳೆಹೊನ್ನೂರು ಸುತ್ತಮುತ್ತ ಮಳೆಯ ಅಬ್ಬರ

    ಬಾಳೆಹೊನ್ನೂರು: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪುಷ್ಯ ಮಳೆಯ ಅಬ್ಬರ ಮುಂದುವರಿದಿದ್ದು ಭಾನುವಾರ ಧಾರಾಕಾರ ಮಳೆಯಾಗಿದೆ.

    ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಬಾಳೆಹೊನ್ನೂರಿನಿಂದ ಕಳಸ-ಹೊರನಾಡು ಸಂಪರ್ಕ ಕಲ್ಪಿಸುವ ಜಕ್ಕಣಕ್ಕಿ ಸಮೀಪದ ತೆಪ್ಪದಗಂಡಿಯಲ್ಲಿ ಬೃಹತ್ ಮರವೊಂದು ಬಿದ್ದು ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಸುಮಾರು ಎರಡು ಗಂಟೆಗಳ ಕಾಲ ರಸ್ತೆ ಬಂದ್ ಆಗಿತ್ತು.
    ಸಮೀಪದ ಹಲಸೂರು ಗ್ರಾಮದಲ್ಲಿ ರಸ್ತೆಗೆ ಮರವೊಂದು ಬಿದ್ದಿದ್ದು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಮರ ತೆರವುಗೊಳಿಸಿ ರಸ್ತೆ ಸಂಚಾರ ಸುಗಮಗೊಳಿಸಿದರು.
    ಬಿ.ಕಣಬೂರು ಗ್ರಾಮದ ಅಕ್ಷರನಗರದಲ್ಲಿ ಸುಧಾಕರ್ ಎಂಬುವರ ಮನೆಯ ಗೋಡೆ ಕುಸಿದು ಪಕ್ಕದ ಮನೆಗೆ ಬಿದ್ದು ಹಾನಿಯಾಗಿದೆ. ಕರ್ಕೇಶ್ವರ ಗ್ರಾಮದ ರಾಮಯ್ಯ ಎಂಬುವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ. ಪಟ್ಟಣದ ಭದ್ರಾ ನದಿಯಲ್ಲಿ ನೀರಿನ ಹರಿವು ಏರಿಕೆಯಾಗಿದ್ದು ನದಿಯ ತಗ್ಗು ಪ್ರದೇಶದ ಕೃಷಿ ಜಮೀನುಗಳಿಗೆ ನೀರು ನುಗ್ಗಿದೆ. ಧಾರಾಕಾರ ಮಳೆಯೊಂದಿಗೆ ಗಾಳಿಯು ಬೀಸುತ್ತಿದ್ದು ಅಲ್ಲಲ್ಲಿ ಸಣ್ಣ ಮರಗಳು ಧರೆಗುರುಳಿವೆ. ಕೆಲವೆಡೆ ವಿದ್ಯುತ್‌ಲೈನ್ ಮೇಲೆ ಮರಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts