ಬಾಹ್ಯಾಕಾಶ ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ

8sor4
Published on

ವಿಜಯವಾಣಿ ಸುದ್ದಿಜಾಲ ಸೊರಬ

ಭಾರತ ದೇಶ ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಧನೆ ಮಾಡಿ ತನ್ನದೇ ಆದ ವೈಶಿಷ್ಟ ್ಯ ಮತ್ತು ದಾಖಲೆ ನಿರ್ಮಿಸಿದೆ. ವಿದ್ಯಾರ್ಥಿಗಳು ಬಾಹ್ಯಾಕಾಶ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ರೋಟರಿ ಕ್ಲಬ್ ಸೊರಬ ಸಂಸ್ಥಾಪಕ ಅಧ್ಯಕ್ಷ ಡಾ. ಜ್ಞಾನೇಶ್ ಹೇಳಿದರು.

ತಾಲೂಕಿನ ಜಡೆ ಹೋಬಳಿ ಕೋಡಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ರೋಟರಿ ಸಂಸ್ಥೆಯಿಂದ ಆಯೋಜಿಸಿದ್ದ ಸ್ಪೇಸ್ ಎನ್‌ಸೈಕ್ಲೋಪಿಡಿಯಾ ಪುಸ್ತಕ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಗತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದೆ. ಅನೇಕ ವಿಜ್ಞಾನಿಗಳು ಸಂಶೋಧನೆ ಮಾಡುವ ಮೂಲಕ ವಿಜ್ಞಾನ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ರೋಟರಿ ಸಂಸ್ಥೆ ವಿತರಿಸುತ್ತಿರುವ ಪುಸ್ತಕವನ್ನು ಓದಿ ಜ್ಞಾನ ವೃದ್ಧಿಸಿಕೊಳ್ಳಬೇಕು ಎಂದರು.

ರೋಟರಿ ಕ್ಲಬ್ ಸೊರಬದ ಅಧ್ಯಕ್ಷ ಜೆ.ಎಸ್.ಮಹಾಂತೇಶ ಮಾತನಾಡಿ, ರೋಟರಿ ಸಂಸ್ಥೆ ಸೇವಾ ಕಾರ್ಯ ನಡೆಸುತ್ತಿದ್ದು, ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಸಾಸಿ ಸಾಧನೆ ಮಾಡಬೇಕು ಎಂದರು.

ಮಾಜಿ ಅಧ್ಯಕ್ಷ ಡಾ. ಎ.ಎಸ್.ನಾಗರಾಜ್ ಮಾತನಾಡಿ, ಶಿಕ್ಷಣ ಎಂದರೆ ಕೇವಲ ಓದುವುದಕ್ಕೆ ಮತ್ತು ತೋರಿಕೆಗೆ ಮಾತ್ರ ಸೀಮಿತವಾಗದೆ ನೀವು ಪಡೆದ ಶಿಕ್ಷಣ ಇನ್ನೊಬ್ಬರ ಜೀವನದಲ್ಲಿ ಪ್ರೇರಣೆಯಾಗಬೇಕು ಎಂದು ತಿಳಿಸಿದರು.

ರೋಟರಿ ಕ್ಲಬ್ ಕಾರ್ಯದರ್ಶಿ ಕೃಷ್ಣಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಪ್ಪ, ಉಪಾಧ್ಯಕ್ಷ ದಿನೇಶ್, ಮುಖ್ಯಶಿಕ್ಷಕ ಪಿ.ಶಿವಾನಂದಪ್ಪ, ಪತ್ರಕರ್ತ ಜಿ.ಎಂ.ತೋಟಪ್ಪ, ಗ್ರಾಪಂ ಸದಸ್ಯ ಶಿವಶಂಕರಪ್ಪ, ಶಿಕ್ಷಕರು, ವಿದ್ಯಾರ್ಥಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net