More

    ಬಿಂಡಿಗನವಿಲೆಯಲ್ಲಿ ಶ್ರೀ ಗರುಡ ದೇವರ ತೆಪ್ಪೋತ್ಸವ

    ನಾಗಮಂಗಲ: ತಾಲೂಕಿನ ಬಿಂಡಿಗನವಿಲೆಯ ಇತಿಹಾಸ ಪ್ರಸಿದ್ಧ ಶ್ರೀಗರುಡ ದೇವರ ತೆಪ್ಪೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ 15 ವರ್ಷಗಳ ನಂತರ ವಿಜೃಂಭಣೆಯಿಂದ ಶನಿವಾರ ಜರುಗಿತು.


    15 ವರ್ಷಗಳಿಂದ ಬಿಂಡಿಗನವಿಲೆ ಕೆರೆ ಭರ್ತಿಯಾಗದ ಹಿನ್ನೆಲೆಯಲ್ಲಿ ತೆಪ್ಪೋತ್ಸವ ನಡೆದಿರಲಿಲ್ಲ. ಕೆಲ ದಿನಗಳಿಂದ ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಕೆರೆ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿ ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ ತೆಪ್ಪೋತ್ಸವ ನಡೆಸಲಾಯಿತು. ಇದಕ್ಕೂ ಮುನ್ನ ಶ್ರೀ ಗರುಡ ದೇವರ ಉತ್ಸವಮೂರ್ತಿಯನ್ನು ಮಂಗಳವಾದ್ಯದೊಂದಿಗೆ ಬಿಂಡಿಗನವಿಲೆಯ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಸರ್ವಾಲಂಕೃತ ಶ್ರೀಗರುಡ ದೇವರ ಉತ್ಸವಮೂರ್ತಿಯನ್ನು ತೆಪ್ಪದಲ್ಲಿರಿಸಿ ಸಾಂಪ್ರದಾಯಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ ತೆಪ್ಪೋತ್ಸವ ಆರಂಭಿಸಲಾಯಿತು.


    ಬಿಂಡಿಗನವಿಲೆ, ಕಂಬದಹಳ್ಳಿ, ಗರುಡನಹಳ್ಳಿ, ಅದ್ದಿಹಳ್ಳಿ, ಹೊನ್ನಾವರ ಹಾಗೂ ಮಲ್ಲೇನಹಳ್ಳಿ ಗ್ರಾಮಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಸಹಸ್ರಾರು ಭಕ್ತರು ತೆಪ್ಪೋತ್ಸವದಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts