More

    ಬಿಎಲ್‌ಒಗಳಿಗೆ ಸೂಕ್ತ ಮಾಹಿತಿ ನೀಡಿ

    ರಾಮದುರ್ಗ, ಬೆಳಗಾವಿ: ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಪ್ರತಿಯೊಬ್ಬರೂ ಜಾಗತಿ ವಹಿಸಿ, ತಮ್ಮ ಪ್ರದೇಶದ
    ಬಿಎಲ್‌ಒಗಳಿಗೆ ಸೂಕ್ತ ಮಾಹಿತಿ ನೀಡಿ ಸಹಕಾರ ನೀಡಬೇಕು ಎಂದು ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ಹೇಳಿದರು.

    ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2022 ಸಾರ್ವಜನಿಕರಿಗಾಗಿ ಬುಧವಾರ ಹಮ್ಮಿಕೊಂಡಿದ್ದ ಜಾಗತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    1ನೇ ಜನವರಿ 2023ಕ್ಕೆ 18 ವರ್ಷ ಪೂರ್ಣಗೊಳ್ಳಲಿರುವ ಹಾಗೂ ಭಾವಿ ಮತದಾರರು ಅಂದರೆ 1ನೇ ಏಪ್ರಿಲ್ 2023, 1ನೇ ಜುಲೈ 2023 ಹಾಗೂ 1ನೇ ಅಕ್ಟೋಬರ್ 2023ಕ್ಕೆ 18 ವರ್ಷ ಪೂರ್ಣಗೊಳ್ಳುವವರು ಸಹ ಮುಂಗಡ ಅರ್ಜಿ ಸಲ್ಲಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ತಿದ್ದುಪಡಿ, ಫೋಟೋ ಬದಲಾವಣೆ ಹಾಗೂ ನಿಧನ ಹೊಂದಿದ ಮತದಾರರ ಹೆಸರನ್ನು ತೆಗೆಸಲು ಸಮೀಪದ ಬಿಎಲ್‌ಒ ಹತ್ತಿರ ಅವಶ್ಯಕ ದಾಖಲಾತಿಗಳೊಂದಿಗೆ ಭೇಟಿ ಮಾಡಬಹುದು. ಈ ಕುರಿತು ಸಾರ್ವಜನಿಕರಿಗೆ ತಿಳಿವಳಿಕೆಗಾಗಿ ಸಾರ್ವಜನಿಕ ಜಾಥಾ ಕಾರ್ಯಕ್ರಮವನ್ನು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ. ವೋಟರ್ಸ್‌ ಹೆಲ್ಪ್‌ಲೈನ್ ಮೊಬೈಲ್ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

    ತಹಸೀಲ್ದಾರ್ ಕಾರ್ಯಾಲಯದಿಂದ ಹೊರಟ ಜಾಥಾ ಹಳೇ ಬಸ್ ನಿಲ್ದಾಣದವರೆಗೆ ಸಂಚರಿಸಿತು. ತಾಪಂ ಇಒ ಪ್ರವೀಣಕುಮಾರ ಸಾಲಿ, ಗ್ರೇಡ್-2 ತಹಸೀಲ್ದಾರ್ ಸಂಜಯ ಖಾತೇದಾರ, ಎನ್‌ಸಿಸಿ ಮತ್ತು ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿಗಳು, ಸ್ವೀಪ್ ಸಮಿತಿ ಸದಸ್ಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts