More

    ಬಿಜೆಪಿಗೆ ಜನರಿಂದಲೇ ತಕ್ಕ ಪಾಠ

    ಬೆಳಗಾವಿ: ಭ್ರಷ್ಟಾಚಾರ, ನಿಷ್ಕ್ರಿಯತೆ ಸೇರಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿರುವ ರಾಜ್ಯ ಯುವ ಕಾಂಗ್ರೆಸ್​ ವತಿಯಿಂದ ಸೋಮವಾರ ಅಧ್ಯ ಮಹಮ್ಮದ್​ ನಲಪಾಡ್​ ನೇತೃತ್ವದಲ್ಲಿ ಕಾರ್ಯಕರ್ತರು ಬೃಹತ್​ ಪ್ರತಿಭಟನೆ ನಡೆಸಿ, ಸುವರ್ಣವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ನಗರದ ಬಿ.ಎಸ್​.ಯಡಿಯೂರಪ್ಪ ಮಾರ್ಗದಿಂದ ಅಲಾರವಾಡ ಕ್ರಾಸ್​ವರೆಗೂ ಸಾವಿರಾರು ಕಾರ್ಯಕರ್ತರು ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ೂಷಣೆ ಕೂಗಿ, ಆಕ್ರೋಶ ಹೊರಹಾಕಿದರು. ಪ್ರತಿಭಟನಾ ಮೆರವಣಿಗೆ ಅಲಾರವಾಡ ಕ್ರಾಸ್​ ತಲುಪುತ್ತಿದ್ದಂತೆ ಡಿಸಿಪಿ ರವೀಂದ್ರ ಗಡಾದಿ ನೇತೃತ್ವದ ಪೊಲೀಸ್​ ತಂಡ ಕಾಂಗ್ರೆಸ್​ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

    ನಲಪಾಡ್​ ಮಾತನಾಡಿ, ಬಿಜೆಪಿ ಮೊದಲು ನಮ್ಮ ಉದ್ಯೋಗ ಕಸಿದುಕೊಂಡಿದೆ. ಈಗ ಚಿಲುಮೆ ಎಂಬ ಸಂಸ್ಥೆ ಮೂಲಕ ನಮ್ಮ ವೋಟ್​ ಕಳ್ಳತನ ಮಾಡಿದೆ. 40 ಪರ್ಸೆಂಟೇಜ್​ ವಿರುದ್ಧ ಧ್ವನಿ ಎತ್ತಿದ ಗುತ್ತಿಗೆದಾರ ಸಂದ ಅಧ್ಯರನ್ನು ಬಂಧಿಸಲಾಗಿದೆ. ಈ ಸರ್ಕಾರ ಪ್ರತಿ ಹಂತದಲ್ಲೂ ಹಗರಣ ಮಾಡುತ್ತಿದ್ದು, ಸರ್ಕಾರದ ವಿರುದ್ಧ ಮಾತನಾಡಲು ಜನ ಭಯ ಪಡುವಂತಾಗಿದೆ. ಈ 40% ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೆ ಯುವ ಕಾಂಗ್ರೆಸ್​ ಸುಮ್ಮನಿರುವುದಿಲ್ಲ ಎಂದು ಗುಡುಗಿದರು. ರಾಹುಲ್​ ಜಾರಕಿಹೊಳಿ ಮಾತನಾಡಿ, ಉತ್ತರ ಕರ್ನಾಟಕ ಆಶೋತ್ತರಗಳಿಗೆ ಧ್ವನಿಯಾಗಬೇಕೆಂಬ ಉದ್ದೇಶದಿಂದ ಸುರ್ವಣಸೌಧ ನಿರ್ಮಿಸಲಾಗಿದೆ. ಆದರೆ, ಬಿಜೆಪಿ ಸರ್ಕಾರದ ರ್ನಿಲ್ಯದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನೆರವೇರುತ್ತಿಲ್ಲ. ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿನ ಅನೇಕ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿಯವರು ಉದ್ಘಾಟನೆ ಮಾಡಲು ಹೊರಟಿದ್ದಾರೆ. ಸರ್ಕಾರದ ನಡೆಗೆ ಜನರು ಬೇಸತ್ತಿದ್ದಾರೆ. ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಯುವ ಜನತೆ ಪಾಠ ಕಲಿಸಲಿದ್ದಾರೆ ಎಂದರು. ಶಾಸಕಿ ಲಕ್ಷಿ$್ಮ ಹೆಬ್ಬಾಳ್ಕರ್​, ವಿಧಾನ ಪರಿಷತ್​ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್​ ಜಿಲ್ಲಾಧ್ಯ ಕಾರ್ತಿಕ ಪಾಟೀಲ, ಮೃಣಾಲ ಹೆಬ್ಬಾಳ್ಕರ್​, ಸೀತಲ ಮಠಪತಿ, ಯುವ ಕಾಂಗ್ರೆಸ್​ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts